ನವದೆಹಲಿ: ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ನಾಳೆಯಿಂದ ಎರಡು ದಿನಗಳ ಕಾಲ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.
ಈ ಭೇಟಿಯ ಸಮಯದಲ್ಲಿ, ಉಪರಾಷ್ಟ್ರಪತಿಗಳು ನಾಳೆ ಬೆಂಗಳೂರಿನಲ್ಲಿ ನಡೆಯಲಿರುವ ನಾಡಪ್ರಭು ಶ್ರೀ ಕೆಂಪೇಗೌಡರ 517 ನೇ ಜನ್ಮ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ.
ಭಾನುವಾರ, ಉಪರಾಷ್ಟ್ರಪತಿಗಳು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಸಂಸ್ಥಾಪನಾ ದಿನಾಚರಣೆ ಮತ್ತು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನದ ಆಚರಣೆಯ ಭಾಗವಾಗಿ ಆಯೋಜಿಸಲಾಗಿರುವ ನಶ ಮುಕ್ತ ಭಾರತ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

