ನವದೆಹಲಿ: ಉಪರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾರೂಢ ಎನ್ ಡಿಎ ಮೈತ್ರಿಕೂಟ ಅಭ್ಯರ್ಥಿಯನ್ನು ಅಂತಿಮಗೊಳಿಸುವ ನಿಟ್ತಿನಲ್ಲಿ ಬಿಜೆಪಿ ಸಂಸದೀಯ ಮಂಡಳಿ ಭಾನುವಾರ ಸಭೆ ನಡೆಸುವ ಸಾಧ್ಯತೆ ಇದೆ.
ಬಿಜೆಪಿ ಹಾಗೂ ಎನ್ ಡಿಎ ಮೈತ್ರಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳಿವೆ. ಜಗದೀಪ್ ಧನಕರ್ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದೆ. ಆಗಸ್ಟ್ 18ರಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಈಗಾಗಲೇ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಆಯ್ಕೆ ಮಾಡುವ ಅಧಿಕಾರ ನೀಡಲಾಗಿದೆ. ಈ ನಿಟ್ಟಿನನಲ್ಲಿ ನಾಳೆ ಸಭೆ ನಡೆಯುವ ಸಾಧ್ಯತೆ ಇದೆ.