ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿಗಳು ಏಕಾಏಕಿ ಆಸ್ಪತ್ರೆಯಲ್ಲಿ ಪ್ರತ್ಯಕ್ಷವಾಗಿರುವುದನ್ನು ಕಂಡು ವೈದ್ಯರು, ಸಿಬ್ಬಂದಿಗಳು ಅರೇ ಕ್ಷಣ ತಬ್ಬಿಬ್ಬಾದ ಘಟನೆ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಗೌಡ ಪಾಟೀಲ್ ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದು, ಆಸ್ಪತ್ರೆ ವಾರ್ಡ್ ಗಳಿಗೆ ತೆರಳಿ ಖುದ್ದು ಪರಿಶೀಲನೆ ನಡೆಸಿದರು. ಚಿಕಿತ್ಸಾ ಸೌಲಭ್ಯ, ಸಮಸ್ಯೆಗಳ ಬಗ್ಗೆ ರೋಗಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದರು.
ಆಸ್ಪತ್ರೆಯಲ್ಲಿನ ಚಿಕಿತ್ಸಾ ವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿಗಳ ಕಾರ್ಯವೈಖರಿ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.