HomeKarnatakaಗೆಲುವಿನ ಮಾನದಂಡ ಪರಿಗಣಿಸಿ ಪ್ರಭಾವಿ ರಾಜಕೀಯ ಕುಟುಂಬಗಳಿಗೆ ಮಣೆ ಹಾಕಿದ ಕಾಂಗ್ರೆಸ್: ಸಚಿವರ ಮಕ್ಕಳು, ಸಂಬಂಧಿಕರಿಗೆ...

ಗೆಲುವಿನ ಮಾನದಂಡ ಪರಿಗಣಿಸಿ ಪ್ರಭಾವಿ ರಾಜಕೀಯ ಕುಟುಂಬಗಳಿಗೆ ಮಣೆ ಹಾಕಿದ ಕಾಂಗ್ರೆಸ್: ಸಚಿವರ ಮಕ್ಕಳು, ಸಂಬಂಧಿಕರಿಗೆ ಟಿಕೆಟ್

ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ರಾಜ್ಯದ 17 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಐವರು ಸಚಿವರ ಮಕ್ಕಳಿಗೆ ಟಿಕೆಟ್ ಘೋಷಣೆಯಾಗಿದೆ. ಸಂಬಂಧಿಕರಿಗೂ ಟಿಕೆಟ್ ನೀಡಲಾಗಿದೆ.

ಅಭ್ಯರ್ಥಿಗಳ ಆಯ್ಕೆಗೆ ಗೆಲುವಿನ ಮಾನದಂಡವನ್ನು ಪರಿಗಣಿಸಿ ಪ್ರಭಾವಿ ರಾಜಕೀಯ ಕುಟುಂಬಗಳಿಗೆ ಕಾಂಗ್ರೆಸ್ ಮಣೆ ಹಾಕಿದೆ.

ಸಚಿವ ಸತೀಶ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಅವರಿಗೆ ಚಿಕ್ಕೋಡಿಯಿಂದ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಗೆ ಬೆಳಗಾವಿಯಿಂದ ಟಿಕೆಟ್ ಘೋಷಣೆಯಾಗಿದೆ.

ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್ ಅವರಿಗೆ ಬಾಗಲಕೋಟೆಯಿಂದ ಟಿಕೆಟ್ ನೀಡಲಾಗಿದೆ.

ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ದಿಂದ ಟಿಕೆಟ್ ನೀಡಲಾಗಿದೆ.

ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಅವರಿಗೆ ಬೀದರ್ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

ದಾವಣಗೆರೆಯಿಂದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ.

ಸಚಿವ ಮಧು ಬಂಗಾರಪ್ಪ ಸಹೋದರಿ ಗೀತಾ ಶಿವರಾಜ್ ಕುಮಾರ್ ಅವರಿಗೆ ಶಿವಮೊಗ್ಗ ಕ್ಷೇತ್ರದಲ್ಲಿ ಟಿಕೆಟ್ ನೀಡಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ಅವರಿಗೆ ಕಲಬುರ್ಗಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

ಶಾಸಕ ರಾಘವೇಂದ್ರ ಹಿಟ್ನಾಳ್ ಸಹೋದರ ರಾಜಶೇಖರ ಹಿಟ್ನಾಳ್ ಅವರಿಗೆ ಕೊಪ್ಪಳ ಕ್ಷೇತ್ರದ ಟಿಕೆಟ್ ನೀಡಲಾಗಿದೆ.

30 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮೃಣಾಲ್ ಹೆಬ್ಬಾಳ್ಕರ್, ಪ್ರಿಯಾಂಕಾ ಜಾರಕಿಹೊಳಿ, ಸಾಗರ್ ಖಂಡ್ರೆ ಮತ್ತು ಸಂಯುಕ್ತ ಪಾಟೀಲ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಜೆಡಿಎಸ್ ಕುಟುಂಬ ರಾಜಕಾರಣದ ಬಗ್ಗೆ ಟೀಕಿಸುತ್ತಿದ್ದ ಕಾಂಗ್ರೆಸ್ ನಲ್ಲಿಯೂ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular