ಶಿಗ್ಗಾಂವಿ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಭರ್ಜರಿ ಗೆಲುವು ಪಡೆದುಕೊಂಡಿದ್ದಾರೆ.
ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪುತ್ರ, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಗೆ ತೀವ್ರ ಹಿನ್ನಡೆಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಭರ್ಜರಿ ಗೆಲುವು ಪಡೆದುಕೊಂಡಿದ್ದಾರೆ. ಯಾಸೀರ್ ಪಠಾಣ್ 83,400 ಮತಗಳನ್ನು ಪಡೆದುಕೊಂಡಿದ್ದು, 13 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಭಾರಿ ಗೆಲುವು ಸಾಧಿಸಿದ್ದಾರೆ . ಯಾಸೀರ್ ಪಠಾಣ್ ಗೆಲುವು ಖಚಿತವಾಗಿದ್ದು, ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

