HomeLatest Newsಗಂಗಾವತಿ ವಿಧಾನಸಭೆ ಉಪಚುನಾವಣೆಯಲ್ಲಿ ಗೆಲುವು ನಮ್ಮದೇ : ಸಿಎಂ ಸಿದ್ದರಾಮಯ್ಯ ವಿಶ್ವಾಸ

ಗಂಗಾವತಿ ವಿಧಾನಸಭೆ ಉಪಚುನಾವಣೆಯಲ್ಲಿ ಗೆಲುವು ನಮ್ಮದೇ : ಸಿಎಂ ಸಿದ್ದರಾಮಯ್ಯ ವಿಶ್ವಾಸ

ವಿಜಯನಗರ : ಗಂಗಾವತಿ ಶಾಸಕರಾಗಿದ್ದ ಜನಾರ್ಧನ ರೆಡ್ಡಿ ಅವರಿಗೆ ನ್ಯಾಯಾಲಯವು ಏಳು ವರ್ಷಗಳ ಶಿಕ್ಷೆಗೆ ಗುರಿಪಡಿಸಿದ್ದು, ಸಂವಿಧಾನದ ನಿಯಮದಂತೆ ಅವರು ಅನರ್ಹರಾಗುತ್ತಾರೆ. ಈ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾದರೆ ಯಾರು ಅಭ್ಯರ್ಥಿಯಾಗುತ್ತಾರೆ ಎಂದು ಪಕ್ಷ ತೀರ್ಮಾನಿಸುತ್ತದೆ. ಗಂಗಾವತಿ ವಿಧಾನಸಭೆಯ ಉಪಚುನಾವಣೆಯಲ್ಲಿ ನಾವು ಖಂಡಿತ ಗೆಲ್ಲುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪ್ರಜಾಪ್ರಭುತ್ವದಲ್ಲಿ ಟೀಕಿಸುವುದು ಸಹಜ. ಆದರೆ ನಮ್ಮ ಸರ್ಕಾರದ ಸಾಧನೆ, ನಮ್ಮ ಬದ್ಧತೆಯ ಬಗ್ಗೆ ಜನರಿಗೆ ತಿಳಿದೇ ತಿಳಿಯುತ್ತದೆ. 2008-2013ರವರೆಗೆ ವಿರೋಧ ಪಕ್ಷದ ನಾಯಕನಾಗಿದ್ದಾಗ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅವರ ಅಕ್ರಮ ಗಣಿಗಾರಿಕೆಯ ವರದಿ ಆಧರಿಸಿ ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲಾಗಿತ್ತು.

ಅಂದು ಬಿಜೆಪಿ ಸರ್ಕಾರ ನನ್ನ ಪಾದಯಾತ್ರೆಯನ್ನು ವಿರೋಧಿಸಿತ್ತು. ಅಂದು ಅಕ್ರಮ ಗಣಿಗಾರಿಕೆ ವಿರುದ್ಧ ನಡೆಸಿದ ಹೋರಾಟಕ್ಕೆ ಇಂದು ಫಲ ದೊರೆತಿದೆ. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರಿಗೆ ಶಿಕ್ಷೆಯಾಗಬೇಕು ಹಾಗೂ ಅಕ್ರಮ ಗಣಿಗಾರಿಕೆ ನಿಲ್ಲಬೇಕು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜನಾರ್ಧನ ರೆಡ್ಡಿಯವರು ಗೆಲ್ಲಲು ನಾನು ಸಹಾಯ ಮಾಡಿದ್ದೆ ಎನ್ನುವುದು ಅಪ್ಪಟ ಸುಳ್ಳು. ಜನಾರ್ಧನ ರೆಡ್ಡಿಯವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ ಸಹಾಯ ಮಾಡಲು ಹೇಗೆ ಸಾಧ್ಯ? ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ವಿರೋಧಿಸುತ್ತಾ ಬಂದವನು, ಈ ವರೆಗೆ ಸೈದ್ಧಾಂತಿಕವಾಗಿ ರಾಜಿಮಾಡಿಕೊಂಡವನಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular