BREAKING: ರಾಜ್ಯಸಭೆ ಚುನಾವಣೆಯಲ್ಲಿ ನಾಸಿರ್ ಹುಸೇನ್ ಗೆಲುವಿನ ಬೆನ್ನಲ್ಲೇ ವಿಧಾನಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಅವರು ಜಯಗಳಿಸಿದ ಸಂದರ್ಭದಲ್ಲಿ ಬೆಂಬಲಿಗರು ವಿಜಯೋತ್ಸವ ಆಚರಿಸಿದ್ದಾರೆ.

ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಲಾಗಿದೆ. ವಿಧಾನಸೌಧದ ಲಾಂಜ್ ಬಳಿ ಸಂಭ್ರಮಾಚರಣೆ ನಡೆದಿದೆ. ನಾಸಿರ್ ಹುಸೇನ್ ಅವರನ್ನು ಬೆಂಬಲಿಗರು ಅಭಿನಂದಿಸಿದ ವೇಳೆ ಘೋಷಣೆ ಕೂಗಲಾಗಿದೆ. ಬೆಂಬಲಿಗರಲ್ಲಿ ಒಬ್ಬ ಪಾಕಿಸ್ತಾನ ಜಿಂದಾಬಾದ್ ಎನ್ನುವ ಘೋಷಣೆ ಕೂಗಿದ್ದು, ಇದು ಅಲ್ಲಿದ್ದ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.

ಬಿಜೆಪಿ ದೂರು 

ಘಟನೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ಪಾಕ್ ಪರ ಘೋಷಣೆ ಕೂಗಿದ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದೆ.

ಕ್ರಮಕೈಗೊಳ್ಳಲಿ

ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಾಸಿರ್ ಹುಸೇನ್, ಆ ರೀತಿ ಘೋಷಣೆ ಕೂಗಿಲ್ಲ. ಒಂದು ವೇಳೆ ಕೂಗಿದ್ದರೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಿ. ನಾನು ಅಲ್ಲಿದ್ದ ವೇಳೆ ನನಗೆ ಕೇಳಿಸಿಲ್ಲ. ಆ ರೀತಿ ಘೋಷಣೆ ಕೂಗಿದ್ದಲ್ಲಿ ಕ್ರಮ ಕೈಗೊಳ್ಳಬಹುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read