Video | ಇದ್ದಕ್ಕಿದ್ದಂತೆ ಹೊತ್ತಿ ಉರಿದ ಆಟೋ; ಬಿಜೆಪಿ ನಾಯಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಗೋಣಿಚೀಲಗಳನ್ನು ಸಾಗಿಸುತ್ತಿದ್ದ ಆಟೋಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು, ಅದೇ ದಾರಿಯಲ್ಲಿ ಸಾಗುತ್ತಿದ್ದ ಬಿಜೆಪಿ ನಾಯಕರೊಬ್ಬರು ತಕ್ಷಣವೇ ಎಚ್ಚರಿಸಿದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ.

ಇಂತಹದೊಂದು ಘಟನೆ ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿದ್ದು, ಆಟೋ ಚಾಲಕ ಪವನ್ ಪರಿಹಾರ್ ಎಂಬವರು ಗೋಣಿಚೀಲಗಳನ್ನು ಸಾಗಿಸುತ್ತಿದ್ದ ವೇಳೆ ಆಟೋಗೆ ಬೆಂಕಿ ತಗುಲಿದೆ.

ಆದರೆ ಇದು ಚಾಲಕನ ಗಮನಕ್ಕೆ ಬಂದಿಲ್ಲ. ಇದೇ ವೇಳೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಅವರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಬಿಜೆಪಿ ಮುಖಂಡ ವಿಪಿನ್ ಶರ್ಮಾ ಇದನ್ನು ನೋಡಿದ್ದಾರೆ.

ಕೂಡಲೇ ಅವರು ಚಾಲಕನನ್ನು ಎಚ್ಚರಿಸಿ ಆ ಮೂಲಕ ಅಗ್ನಿಶಾಮಕದಳ ಸ್ಥಳಕ್ಕೆ ಬರುವಂತೆ ಮಾಡಿದ್ದಾರೆ, ಅಷ್ಟರೊಳಗಾಗಿ ಆಟೋ ಸಹಿತ ಲಗೇಜ್ ಒಂದಷ್ಟು ಭಸ್ಮವಾಗಿದ್ದು, ಚಾಲಕನಿಗೆ 25,000 ರೂಪಾಯಿಗಳಷ್ಟು ನಷ್ಟವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read