ಜಾಲತಾಣದಲ್ಲಿ ಖಾಸಗಿ ಕ್ಷಣಗಳ ವಿಡಿಯೋ ಹರಿಬಿಟ್ಟ ಕಿಡಿಗೇಡಿ

ರಾಮನಗರ: ಪತಿಯನ್ನು ಕೊಲೆ ಮಾಡುವುದಾಗಿ ಬೆದರಿಸಿ ಆತನ ಪತ್ನಿಯ ಜೊತೆ ಬಲವಂತವಾಗಿ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ವ್ಯಕ್ತಿಯ ವಿರುದ್ಧ ರಾಮನಗರದ ಸಿಇಎನ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಮನಗರ ತಾಲೂಕಿನ ದೊಡ್ಡಮಣ್ಣುಗುಡ್ಡೆ ನಿವಾಸಿ ರಾಜೇಶ್ ವಿರುದ್ಧ ನೊಂದ ಮಹಿಳೆ ದೂರು ದಾಖಲಿಸಿದ್ದಾರೆ. 14 ವರ್ಷಗಳ ಹಿಂದೆ ಮಹಿಳೆಗೆ ಮದುವೆಯಾಗಿದ್ದು, ಪತಿ, ಇಬ್ಬರು ಮಕ್ಕಳಿದ್ದಾರೆ. ಎರಡು ವರ್ಷದಿಂದ ಮಹಿಳೆಯನ್ನು ಬೆದರಿಸಿ ಬಲವಂತವಾಗಿ ಕರೆದುಕೊಂಡು ಹೋಗಿ ವಿಡಿಯೋ ಮಾಡಿಕೊಂಡಿದ್ದಾನೆ. ಜಾಲತಾಣಗಳಲ್ಲಿ ಆ ವಿಡಿಯೋಗಳನ್ನು ಹರಿಬಿಟ್ಟಿದ್ದು, ಇದರಿಂದಾಗಿ ನನಗೆ, ಪತಿ, ಮಕ್ಕಳ ಮರ್ಯಾದೆ ಹೋಗಿದೆ. ಕುಟುಂಬದವರಿಗೆ ಮಾನಸಿಕವಾಗಿ ನೋವುಂಟಾಗಿದೆ ಎಂದು ಮಹಿಳೆ ದೂರು ನೀಡಿದ್ದಾರೆ.

ಕರೆದಾಗಲೆಲ್ಲ ಸ್ಪಂದಿಸದಿದ್ದರೆ ಉಳಿದ ವಿಡಿಯೋಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾರೆ. ಈ ಹಿಂದೆ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆತನಿಂದ ಮುಚ್ಚಳಿಕೆ ಬರೆಸಿಕೊಂಡು ಕಳುಹಿಸಲಾಗಿತ್ತು. ಈಗ ಮತ್ತೆ ಪೀಡಿಸುತ್ತಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read