ಮೀರತ್: ಉತ್ತರ ಪ್ರದೇಶದ ಮೀರತ್ ಕ್ಯಾಂಟ್ ರೈಲ್ವೆ ನಿಲ್ದಾಣದಿಂದ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ.
ವ್ಯಕ್ತಿಯೊಬ್ಬ ಮದ್ಯದ ಅಮಲಿನಲ್ಲಿ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ತನ್ನ ಕಾರ್ ಚಲಾಯಿಸುತ್ತಿರುವುದನ್ನು ವಿಡಿಯೋದಲ್ಲಿ ಸೆರೆಹಿಡಿಯಲಾಗಿದೆ. ಜಾರ್ಖಂಡ್ ನಂಬರ್ ಪ್ಲೇಟ್‌ಗಳನ್ನು ಅಳವಡಿಸಲಾದ ಕಾರ್ ನಿಲ್ದಾಣದಿಂದ ಹೊರಡುವ ಚಲಿಸುವ ರೈಲಿನ ಬಳಿಯೇ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಭಯ ಹುಟ್ಟಿಸಿತ್ತು. ಪ್ಲಾಟ್‌ಫಾರ್ಮ್‌ನಲ್ಲಿ ಅವ್ಯವಸ್ಥೆ ಉಂಟಾಗಿತ್ತು.
ಸ್ಥಳದಲ್ಲಿ ಹಾಜರಿದ್ದ ಪ್ರಯಾಣಿಕರು ವಾಹನವನ್ನು ಪ್ಲಾಟ್‌ಫಾರ್ಮ್‌ನಲ್ಲಿ ನೋಡಿದ ತಕ್ಷಣ ತಮ್ಮ ಸುರಕ್ಷತೆಯ ಬಗ್ಗೆ ಭಯಭೀತರಾಗಿ ಚಾಲಕನನ್ನು ತಡೆದಿದ್ದಾರೆ. ಕುಡಿದ ಅಮಲಿನಲ್ಲಿದ್ದ ಚಾಲಕನ ವಶಕ್ಕೆ ಪಡೆಯಲಾಗಿದೆ. ವಾಹನವನ್ನು ವಶಪಡಿಸಿಕೊಂಡಿದ್ದಾರೆ.