ಹಾವೇರಿ: ಕುಡಿದ ಮತ್ತಿನಲ್ಲಿ ಯುವಕನೊಬ್ಬ ವಿಡಿಯೋ ಮಾಡುತ್ತಾ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಕಲವೆತ್ತು ಗ್ರಾಮದಲ್ಲಿ ನಡೆದಿದೆ.
ಕಂಠಪೂರ್ತಿ ಕುಡಿದು ಬಂದ ಯುವಕನೊಬ್ಬ ನಿಂತುಕೊಳ್ಳಲು ಆಗದ ಸ್ಥಿತಿಯಲ್ಲಿದ್ದ. ತೂರಾಡುತ್ತಲೇ ನದಿ ಬಳಿ ಬಂದ ಯುವಕ ವಿಡಿಯೋ ಮಾಡುತ್ತ ತುಂಗಭದ್ರಾ ನದಿಗೆ ಹಾರಿದ್ದಾನೆ. ಸ್ಥಳೀಯರು ತಕ್ಷಣ ಯುವಕನನ್ನು ನದಿಯಿಂದ ಮೇಲಕೆತ್ತಲು ಯತ್ನಿಸಿದ್ದಾರೆ. ಆದರೂ ಸಾಧ್ಯವಾಗಿಲ್ಲ.
ಯುವಕ ನದಿಯಲ್ಲಿ ಈಜಲೆತ್ನಿಸಿದ್ದಾನೆ ಆದರೆ ಸಾಧ್ಯವಾಗದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಯುವಕನ ಗುರುತು ಪತ್ತೆಯಾಗಿಲ್ಲ. ಯಾವ ಕಾರಣಕ್ಕೆ ಇಂತಹ ದುಡುಕಿನ ನಿರ್ಧಾರ ಕೈಗೊಂಡಿದ್ದಾನೆ ಎಂಬುದೂ ತಿಳಿದುಬಂದಿಲ್ಲ.
ಪ್ರದೋಷ್ ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ದರ್ಶನ್ ತುರ್ತು ವಿಚಾರಣೆಗೆ ಅರ್ಜಿ: ಇಂದೇ ವಿಚಾರಣೆ ನಡೆಸಲು ಹೈಕೋರ್ಟ್ ಸಮ್ಮತಿ
ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ೧೪ನೇ ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ದರ್ಶನ್ ತುರ್ತು ವಿಚಾರಣೆ ನಡೆಸುವಂತೆ ಹೈಕೋರ್ಟ್ ನಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ.
ಆರೋಪಿ ಪ್ರದೋಷ್ ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವುದಾಗಿ ಕೋರ್ಟ್ ಆದೇಶ ನೀಡಿತ್ತು. ಇದರಿಂದ ಆತಂಕಗೊಂಡಿರುವ ಕೊಲೆ ಆರೋಪಿ ನಟ ದರ್ಶನ್, ಪ್ರದೋಷ್ ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ನಾಳೆ ವಿಚಾರಣೆಗೆ ಸಮನ್ಸ್ ನೀಡಿತ್ತು. ಆದರೆ ದರ್ಶನ್ ಪರ ವಕೀಲರು ಇಂದೇ ತುರ್ತು ವಿಚಾರಣೆ ನಡೆಸುವಂತೆ ಹೈಕೋರ್ಟ್ ನಲ್ಲಿ ಮತ್ತೆ ಅರ್ಜಿ ಸಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ, ಇಂದು ವಿಚಾರಣೆ ನಡೆಸಲು ಸಮ್ಮತಿ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಸಂಜೆ ವೇಳೆಗೆ ದರ್ಶನ್ ಅರ್ಜಿ ವಿಚಾರಣೆ ನಡೆಯಲಿದೆ.
ಇನ್ನು ದರ್ಶನ್ ಪರ ವಕೀಲ ಹಷ್ಮತ್ ಪಾಷಾ, ಮಾಫಿ ಸಾಕ್ಷಿ ಆದೇಶದ ಪ್ರಕ್ರಿಯೆಯಲ್ಲಿ ಲೋಪದೋಷಗಳಿವೆ ಎಂದು ಮನವಿ ಮಾಡಿದ್ದಾರೆ. ಈ ವೇಳೆ ದರ್ಶನ್ ಪರ ವಕೀಲರಿಗೆ ಇದು ಎರಡನೇ ಸುತ್ತಿನ ಹೋರಾಟವೇ? ಎಂದು ಪ್ರಶ್ನಿಸಿರುವ ಹೈಕೋರ್ಟ್ ಪೀಠ, ಎಸ್ ಪಿಪಿ ಪ್ರಸನ್ನ ಕುಮಾರ್ ಅವರಿಗೆ ಮಾಹಿತಿ ನೀಡುವಂತೆ ಸೂಚಿಸಿದೆ.
ಸೆಪ್ಟೆಂಬರ್ 2ರಂದು ಮಾಫಿ ಸಾಕ್ಷಿಯಾಗಿ ಪ್ರದೋಷ್ ವಿಚಾರಣೆ ಇರುವುದರಿಂದ ಇಂದು (ಸೆಪ್ಟೆಂಬರ್ 1) ತುರ್ತಾಗಿ ತಮ್ಮ ಅರ್ಜಿ ವಿಚಾರಣೆ ಮಾಡಬೇಕು ಎಂದು ದರ್ಶನ್ ಪರವಾಗಿ ಹಿರಿಯ ವಕೀಲ ಹಷ್ಮತ್ ಪಾಷಾ ಅವರು ಮಾಡಿದ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ.

