Viral Video | ಮಿಂಚಿನ ವೇಗದಲ್ಲಿ ಊಟ ಬಡಿಸಿದ ನಾಲ್ವರು ಯುವಕರು

ಭಂಡಾರ ಔತಣದಲ್ಲಿ ನಾಲ್ವರು ಯುವಕರ ಗುಂಪು ಮಿಂಚಿನ ವೇಗದಲ್ಲಿ ಆಹಾರ ಬಡಿಸುತ್ತಿರುವುದನ್ನು ತೋರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ವ್ಯಾಪಕ ಗಮನ ಸೆಳೆದಿದೆ.

X ನಲ್ಲಿ ಹಂಚಿಕೊಳ್ಳಲಾದ ಕ್ಲಿಪ್ ನಲ್ಲಿ, ಕೆಂಪು ಶರ್ಟ್ ಮತ್ತು ಕಪ್ಪು ಪ್ಯಾಂಟ್‌ ಧರಿಸಿರುವ ನಾಲ್ವರು ಯುವಕರು ಜನರ ಸಾಲಿನಲ್ಲಿ ವೇಗವಾಗಿ ಚಲಿಸುತ್ತ ಪೇಪರ್ ಪ್ಲೇಟ್‌, ಕಪ್‌ ಮತ್ತು ಬೌಲ್‌ಗಳನ್ನು ಹಾಕುವುದನ್ನು ನೋಡಬಹುದಾಗಿದೆ.

ನಿಖರತೆಯೊಂದಿಗೆ ಏಕಕಾಲದಲ್ಲಿ ಇವರುಗಳು ಆಹಾರ ಬಡಿಸುವುದನ್ನು ವಿಡಿಯೋ ಒಳಗೊಂಡಿದೆ. ಮೊದಲ ಗುಂಪು ಕಾರ್ಯನಿರ್ವಹಿಸುತ್ತಿದ್ದಂತೆ, ಎರಡನೇ ಗುಂಪು ಅದೇ ವೇಗದ ಚಲನೆಯನ್ನು ಕಾಯ್ದುಕೊಳ್ಳುವ ಮೂಲಕ ಗಮನ ಸೆಳೆಯುತ್ತದೆ.

“MBBS (ಮಾಸ್ಟರ್ ಇನ್ ಭಂಡಾರ ಮತ್ತು ಬ್ಯಾಚುಲರ್ ಆಫ್ ಸರ್ವಿಂಗ್)” ಎಂಬ ಶೀರ್ಷಿಕೆಯ ವೀಡಿಯೊವು 600,000 ವೀಕ್ಷಣೆಗಳನ್ನು ಗಳಿಸಿದೆ, ಬಳಕೆದಾರರು ಬಡಿಸುವ ಅವರ ವೇಗ ಮತ್ತು ಕೌಶಲ್ಯದ ಬಗ್ಗೆ ವಿಸ್ಮಯ ವ್ಯಕ್ತಪಡಿಸಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read