ಕಾಲೇಜ್ ನಲ್ಲೇ ವಿದ್ಯಾರ್ಥಿನಿ –ವಿದ್ಯಾರ್ಥಿ ರೊಮ್ಯಾನ್ಸ್: ಅಶ್ಲೀಲ ಕೃತ್ಯದ ವಿಡಿಯೋ ವೈರಲ್

ಶಹಜಹಾನ್‌ಪುರ: ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಅಶ್ಲೀಲ ಕೃತ್ಯ ಎಸಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈದ್ಯಕೀಯ ಕಾಲೇಜು ಪ್ರಾಂಶುಪಾಲ ರಾಜೇಶ್‌ಕುಮಾರ್‌ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ವಿಡಿಯೋದಲ್ಲಿ ಅರೆವೈದ್ಯಕೀಯ ವಿದ್ಯಾರ್ಥಿಗಳ ಗುಂಪು ಸಭಾಂಗಣದಲ್ಲಿ ಕುಳಿತಿರುವುದನ್ನು ಕಾಣಬಹುದು, ಅವರಲ್ಲಿ ಒಬ್ಬರು ಇನ್ನೊಬ್ಬ ವಿದ್ಯಾರ್ಥಿಯೊಂದಿಗೆ ಅಶ್ಲೀಲ ಕೃತ್ಯಗಳನ್ನು ಮಾಡುತ್ತಿದ್ದಾರೆ.

ವಿದ್ಯಾರ್ಥಿಗಳನ್ನು ಗುರುತಿಸುವ ಪ್ರಯತ್ನ ಮಾಡಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುವುದು. ಇದು ಗಂಭೀರ ವಿಚಾರವಾಗಿದ್ದು, ಯಾವುದೇ ಬೆಲೆ ತೆತ್ತಾದರೂ ಕಾಲೇಜಿನ ಗೌರವಕ್ಕೆ ಧಕ್ಕೆ ತರಲು ಬಿಡುವುದಿಲ್ಲ ಎಂದು ವೈದ್ಯಕೀಯ ಕಾಲೇಜು ಪ್ರಾಂಶುಪಾಲ ರಾಜೇಶ್ ಕುಮಾರ್ ತಿಳಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read