HomeIndiaಮುಕೇಶ್ ಅಂಬಾನಿ ಪುತ್ರನ ಮದುವೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿ: ನವ ದಂಪತಿಗೆ ಶುಭ ಹಾರೈಕೆ

ಮುಕೇಶ್ ಅಂಬಾನಿ ಪುತ್ರನ ಮದುವೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿ: ನವ ದಂಪತಿಗೆ ಶುಭ ಹಾರೈಕೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸಂಜೆ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮುಂಬೈನ ಜಿಯೋ ವರ್ಲ್ಡ್ ಸೆಂಟರ್ ಬಿಕೆಸಿಯಲ್ಲಿ ನಡೆದ ಉದ್ಯಮಿ ಮುಖೇಶ್ ಅಂಬಾನಿ ಪುತ್ರ ಅನಂತ್, ರಾಧಿಕಾ ಅವರ ಮದುವೆ ಶುಭ ಆಶೀರ್ವಾದ ಸಮಾರಂಭದಲ್ಲಿ ಮೋದಿ ಭಾಗಿಯಾಗಿ ನವದಂಪತಿಗೆ ಶುಭ ಹಾರೈಸಿ ಆಶೀರ್ವದಿಸಿದ್ದಾರೆ.

ಪ್ರಧಾನ ಮಂತ್ರಿಗಳನ್ನು ಉದ್ಯಮಿ ಮುಕೇಶ್ ಅಂಬಾನಿ ಅವರು ಸ್ವಾಗತಿಸಿ ಸಮಾರಂಭದ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಪ್ರಧಾನಿ ಮೋದಿ ಅವರು ಮುಕೇಶ್ ಅಂಬಾನಿ ಮತ್ತು ಅನಂತ್ ಅಂಬಾನಿ ಅವರೊಂದಿಗೆ ಮುಂದಿನ ಸಾಲಿನಲ್ಲಿ ಕುಳಿತಿದ್ದಾರೆ, ಇದಕ್ಕೂ ಮೊದಲು ಮದುವೆಗೆ ಬಂದ ಅತಿಥಿಗಳತ್ತ ಕೈಮುಗಿದು ನಮಸ್ಕರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular