HomeKarnatakaವಿದ್ಯಾರ್ಥಿನಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಶೇರ್ ಮಾಡಿದ ಶಿಕ್ಷಕ ಸೇರಿ ಇಬ್ಬರು ಅರೆಸ್ಟ್

ವಿದ್ಯಾರ್ಥಿನಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಶೇರ್ ಮಾಡಿದ ಶಿಕ್ಷಕ ಸೇರಿ ಇಬ್ಬರು ಅರೆಸ್ಟ್

ರಾಮನಗರ: ವಿದ್ಯಾರ್ಥಿನಿಗೆ ಬೆದರಿಕೆ ಹಾಕಿ ಅಶ್ಲೀಲ ವಿಡಿಯೋ ಚಿತ್ತೀಕರಿಸಿಕೊಂಡು ಅದನ್ನು ಶೇರ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಕನಕಪುರ ನಗರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಖಾಸಗಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಅಂತೋಣಿ(51), ನಂದೀಶ್(32) ಬಂಧಿತ ಆರೋಪಿಗಳಾಗಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯಾರ್ಥಿನಿಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ ಆರೋಪಿ ಶಿಕ್ಷಕ ಕುಟುಂಬದವರಿಗೆ ತೊಂದರೆ ನೀಡುವುದಾಗಿ ವಿದ್ಯಾರ್ಥಿನಿಯನ್ನು ಬೆದರಿಸಿದ್ದಾನೆ. ವಿಡಿಯೋ ಕರೆ ಮಾಡಿದ್ದ ಆರೋಪಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿಕೊಂಡಿದ್ದು, ಅದನ್ನು ಶೇರ್ ಮಾಡಿದ್ದಾನೆ ಎನ್ನಲಾಗಿದೆ. ಸಂತ್ರಸ್ತೆಯ ತಾಯಿ ಕನಕಪುರ ನಗರ ಠಾಣೆಗೆ ದೂರು ನೀಡಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular