ರೀಲ್‌ ಗಾಗಿ ಕಾರ್‌ ಮೇಲೆ ಬೆತ್ತಲಾದ ಯುವಕ; ವಿಡಿಯೋ ವೈರಲ್‌ ಬಳಿಕ ತನಿಖೆಗೆ ಆದೇಶ | Viral Video

ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಐಷಾರಾಮಿ ಕಾರಿನ ಮೇಲೆ ಬೆತ್ತಲೆಯಾಗಿ ಕುಳಿತಿರುವ ಯುವಕನ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಮೂರು ದಿನಗಳ ಹಿಂದೆ ಮಾಧೋತಾಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಪೊಲೀಸ್ ತನಿಖೆ ಆಗುವಂತೆ ಮಾಡಿದೆ.

ವಿಡಿಯೋದಲ್ಲಿ, ಯುವಕ ಮದ್ಯದ ಅಮಲಿನಲ್ಲಿ ಅಸಭ್ಯ ಭಂಗಿಯಲ್ಲಿ ಬಹುಶಃ, ಸಾಮಾಜಿಕ ಮಾಧ್ಯಮ ರೀಲ್ ರಚಿಸಲು ಪ್ರಯತ್ನಿಸುತ್ತಿರುವುದು ಕಂಡುಬರುತ್ತದೆ. ಘಟನೆಯನ್ನು ನೋಡಿದ ಸ್ಥಳೀಯ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿ, ಕಾರನ್ನು ನಿಲ್ಲಿಸಿ, ಯುವಕನನ್ನು ಕೆಳಗಿಳಿಯುವಂತೆ ಒತ್ತಾಯಿಸಿದ್ದಾರೆ.

ಈ ಘಟನೆಯ ವಿಡಿಯೋ ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ತೀವ್ರ ಖಂಡನೆಗೆ ಗುರಿಯಾಗಿದೆ. ಈ ಘಟನೆಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಗುರುತಿಸಲು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಮತ್ತು ಅಂತಹ ನಡವಳಿಕೆಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read