ಬೆಂಗಳೂರು: ರಾಜ್ಯ ವಿಧಾನ ಮಂಡಲ ಅಧಿವೇಶನ ಮಂಗಳವಾರದಿಂದ ಪುನರಾರಂಭವಾಗಲಿದೆ. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಚರ್ಚೆ ನಡೆಯಲಿದೆ.
ವಿಬಿ ಜಿ ರಾಮ್ ಜಿ ಕಾಯ್ದೆ ವಿಚಾರವಾಗಿ ವಾರಾಂತ್ಯದಲ್ಲಿ ಖಂಡಣಾ ನಿರ್ಣಯ ಮಂಡನೆ ಮಾಡುವ ಸಾಧ್ಯತೆ ಇದೆ. ಕಲಾಪದಲ್ಲಿ ವಾಡಿಕೆಯಂತೆ ಪ್ರಶ್ನೋತ್ತರ ಮತ್ತು ಶೂನ್ಯ ವೇಳೆಗೆ ಅವಕಾಶ ಇರುತ್ತದೆ. ನಂತರ ಸಾರ್ವಜನಿಕ ಮಹತ್ವದ ವಿಷಯಗಳ ಚರ್ಚೆಗೆ ಪ್ರತಿಪಕ್ಷಗಳು ಒತ್ತಡ ತಂದರೆ ಅದಕ್ಕೂ ಸಮಯ ನಿಗದಿಪಡಿಸುವ ಸಾಧ್ಯತೆ ಇದೆ. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಚರ್ಚೆಗೆ ಸಭಾಧ್ಯಕ್ಷರು ಸಮಯ ನಿಗದಿ ಮಾಡಲಿದ್ದಾರೆ.
ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ನಾಯಕರು ವಂದನಾ ನಿರ್ಣಯದ ಮೇಲೆ ಮಾತನಾಡಲಿದ್ದಾ. ನಂತರ ವಿವಿಧ ಪಕ್ಷಗಳ ಇತರ ಸದಸ್ಯರಿಗೆ ಅವಕಾಶ ನೀಡಲಾಗುವುದು. ಚರ್ಚೆ ಮುಗಿದ ನಂತರ ಸಿಎಂ ಸಿದ್ದರಾಮಯ್ಯ ಸರ್ಕಾರದ ಪರವಾಗಿ ಉತ್ತರ ನೀಡಲಿದ್ದಾರೆ. ಕೇಂದ್ರದ ವಿಬಿ ಜಿ ರಾಮ್ ಜಿ ಯೋಜನೆ ಕುರಿತು ರಾಜ್ಯ ಸರ್ಕಾರ ಸದನದಲ್ಲಿ ಖಂಡನಾ ನಿರ್ಣಯ ಮಂಡಿಸಲು ಉದ್ದೇಶಿಸಿದೆ.

