HomeKarnatakaವಿಧಾನ ಪರಿಷತ್ ಚುನಾವಣೆ: ಕಣದಲ್ಲಿ 76 ಅಭ್ಯರ್ಥಿಗಳು

ವಿಧಾನ ಪರಿಷತ್ ಚುನಾವಣೆ: ಕಣದಲ್ಲಿ 76 ಅಭ್ಯರ್ಥಿಗಳು

ಬೆಂಗಳೂರು: ವಿಧಾನ ಪರಿಷತ್ 6 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಶುಕ್ರವಾರ ನಾಮಪತ್ರಗಳ ಪರಿಶೀಲನೆ ಪ್ರಕ್ರಿಯೆ ನಡೆಸಲಾಗಿದೆ. ಐದು ಕ್ಷೇತ್ರಗಳಿಗೆ ಸಂಬಂಧಿಸಿದಂತೆ 76 ನಾಮಪತ್ರಗಳು ಮಾನ್ಯವಾಗಿವೆ. 19 ನಾಮಪತ್ರಗಳು ತಿರಸ್ಕೃತಗೊಂಡಿದೆ.

ಆಗ್ನೇಯ ಶಿಕ್ಷಕರ ಕ್ಷೇತ್ರದ ನಾಮಪತ್ರಗಳ ಪರಿಶೀಲನ ಪ್ರಕ್ರಿಯೆ ಶನಿವಾರ ನಡೆಸಲಾಗುವುದು. ಒಟ್ಟು 103 ಅಭ್ಯರ್ಥಿಗಳಿಂದ 156 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಈಶಾನ್ಯ ಪದವೀಧರ ಕ್ಷೇತ್ರ 26, ಬೆಂಗಳೂರು ಪದವೀಧರ ಕ್ಷೇತ್ರ 16, ನೈರುತ್ಯ ಶಿಕ್ಷಕರ ಕ್ಷೇತ್ರ 9, ನೈರುತ್ಯ ಪದವೀಧರ ಕ್ಷೇತ್ರ 12, ದಕ್ಷಿಣ ಶಿಕ್ಷಕರ ಕ್ಷೇತ್ರ 13 ನಾಮಪತ್ರಗಳು ಅಂಗೀಕೃತಗೊಂಡಿವೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular