BIG NEWS: ವಿಧಾನ ಪರಿಷತ್ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ಬೆಂಗಳೂರು: ವಿಧಾನಸಭೆಯಿಂದ ಆಯ್ಕೆಯಾಗುವ ವಿಧಾನ ಪರಿಷತ್ ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ.

ವಿಧಾನಸಭೆಯಿಂದ ಪರಿಷತ್ ಗೆ ಆಯ್ಕೆಯಾಗಿರುವ 11 ಸದಸ್ಯರ ಅವಧಿ ಜೂನ್ 17ಕ್ಕೆ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ವಿಧಾನ ಪರಿಷತ್ ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಿದೆ.

ಜೂನ್ 13ರಂದು ಮತದಾನ ನಡೆಯಲಿದೆ. ಅಂದೇ ಫಲಿತಾಂಶ ಕೂಡ ಪ್ರಕಟವಾಗಲಿದೆ. ಮೇ 27ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಜೂನ್ 3 ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ಜೂನ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 6ರಂದು ನಾಮಪತ್ರ ವಾಪಾಸ್ ಪಡೆಯಲು ಕೊನೆ ದಿನ.

ಜೂನ್ 13ರಂದು ಮತದಾನ ನಡೆಯಲಿದ್ದು, ಅದೇ ದಿನ ಸಂಜೆ 5 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read