ಬೆಂಗಳೂರು: ವಿಧಾನಮಂಡಲ ವಿಶೇಶ ಜಂಟಿ ಅಧಿವೇಶನದ ಅವಧಿ ವಿಸ್ತರಣೆಯಾಗಿದೆ. ಈ ಬಗ್ಗೆ ವಿಧಾನಸಭೆಯ ಕಾರ್ಯಕಲಾಪ ಸಲಹಾ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ವಿಧಾನಮಂಡಲ ಜಂಟಿ ಅಧಿವೇಶನವನ್ನು ಮೂರು ದಿನಗಳ ಕಾಲ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಜನವರಿ 31ರವರೆಗೆ ನಡೆಯಬೇಕಾಗಿದ್ದ ಜಂಟಿ ಅಧಿವೇಶನ ಇದೀಗ ಫೆಬ್ರವರಿ ೪ರವರೆಗೆ ನಡೆಯಲಿದೆ.
ವಿಧಾನಸೌಧದಲ್ಲಿ ನಡೆದ ವಿಧಾನಸಭೆ ಕಾರ್ಯಕಲಾಪ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಮನರೇಗಾ ಹೆಸರು ಬದಲಾಯಿಸಿ ಕೇಂದ್ರ ಸರ್ಕಾರ ವಿಬಿಜಿ ರಾಮ್ ಜಿ ಕಾಯ್ದೆ ಜಾರಿಗೆ ತಂದಿದ್ದು, ಕೇಂದ್ರ ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿಸಿ ಈ ಬಗ್ಗೆ ಚರ್ಚೆ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರ ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನ ಕರೆದಿತ್ತು.
ಈ ಹಿನ್ನೆಲೆಯಲ್ಲಿ ಜನವರಿ 22ರಿಂದ ಅಧಿವೇಸನ ಆರಂಭವಾಗಿತ್ತು. ಜನವರಿ 31ರಂದು ಅಧಿವೇಶನ ಮುಗಿಯಬೇಕಾಗಿತ್ತು. ಶನಿವಾರ ವಿಧಾನಮಂಡಲ ಜಂಟಿ ಅಧಿವೇಶನ ಇರುವುದಿಲ್ಲ. ಅಲ್ಲದೇ ಅಧಿವೇಶನದಲ್ಲಿ ಚರ್ಚೆಯಾಗಬೇಕಾದ ವಿಷಯಗಳು ಇನ್ನೂ ಬಾಕಿ ಇರುವುದರಿಂದ ಮೂರು ದಿನಗಳ ಕಾಲ ಅಧಿವೇಶನ ವಿಸ್ತರಿಸಲಾಗಿದೆ. ಫೆಬ್ರವರಿ 4ರವರೆಗೂ ವಿಧಾನಮಂಡಲ ಜಂಟಿ ಅಧಿವೇಶನ ನಡೆಯಲಿದೆ.

