HomeKarnatakaBIG NEWS: ವಿಧಾನ ಪರಿಷತ್ ಉಪಚುನಾವಣೆ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಡೇಟ್ ಫಿಕ್ಸ್

BIG NEWS: ವಿಧಾನ ಪರಿಷತ್ ಉಪಚುನಾವಣೆ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಡೇಟ್ ಫಿಕ್ಸ್

ಬೆಂಗಳೂರು: ವಿಧಾನ ಪರಿಷತ್ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ.

ಕೋಟ ಶ್ರೀನಿವಾಸ್ ಪೂಜಾರಿ ರಾಜುನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆ ಅಕ್ಟೋಬರ್ 21ರಂದು ನಡೆಯಲಿದೆ.

ಸೆಪ್ಟೆಂಬರ್ 26ರಿಂದ ಅಧಿಸೂಚನೆ ಜಾರಿಯಾಗಲಿದೆ. ಅಕ್ಟೋಬರ್ 3ರಂದು ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದೆ. ಅಕ್ಟೋಬರ್ 4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ಟೋಬರ್ 21ರಂದು ಬೆಳಿಗ್ಗೆ 8ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ.

 

For Latest News Updates, Join Our Whatsapp Community🚩
RELATED ARTICLES

Most Popular