BREAKING NEWS : ವಿಧಾನಪರಿಷತ್ ಉಪಚುನಾವಣೆ : `AICC’ ಯಿಂದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಘೋಷಣೆ

ಬೆಂಗಳೂರು : ಜೂನ್ 30 ರಂದು ನಡೆಯಲಿರುವ ವಿಧಾನಪರಿಷತ್ ಉಪಚುನಾವಣೆಗೆ (by-elections to Lehislative Counci) ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು (Congress names) ಎಐಸಿಸಿ (AICC) ಇಂದು ಬಿಡುಗಡೆ ಮಾಡಿದೆ.

ವಿಧಾನ ಪರಿಷತ್ ಉಪ ಚುನಾವಣೆಗೆ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು, ಎನ್.ಎಸ್.ಬೋಸರಾಜು ಅವರನ್ನು ಕಾಂಗ್ರೆಸ್ ಅಭ್ಯರ್ಥಿಗಳನ್ನಾಗಿ ಘೋಷಿಸಿದೆ.ನಾಳೆ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಇದ್ದು, ಜೂನ್ 30 ರಂದು ಚುನಾವಣೆ ನಡೆಯಲಿದೆ.

ಕರ್ನಾಟಕ ವಿಧಾನ ಪರಿಷತ್ ಸದಸ್ಯರ ಉಪಚುನಾವಣೆಯು ಜೂನ್ 30 ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನಾಂಕ ಆಗಿದೆ.ಜೂನ್ 20 ನಾಳೆ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಆಗಿದೆ. ಜೂನ್ನಲ್ಲಿ ಮೂವರು ಸದಸ್ಯರ ಅಧಿಕಾರಾವಧಿ ಕೊನೆಗೊಳ್ಳುವ ಕಾರಣ ಉಪಚುನಾವಣೆ ಅನಿವಾರ್ಯವಾಗಿತ್ತು. ಶಾಸಕರಾದ ಸವದಿ ಲಕ್ಷ್ಮಣ್ ಮತ್ತು ಬಾಬುರಾವ್ ಚಿಂಚನಸೂರ್ ಅವರ ಅವಧಿ ಕ್ರಮವಾಗಿ ಜೂನ್ 14 ಮತ್ತು ಜೂನ್ 17 ರಂದು ಕೊನೆಗೊಂಡರೆ, ಆರ್. ಶಂಕರ್ ಅವರ ಅವಧಿ ಜೂನ್ 30 ರಂದು ಕೊನೆಗೊಳ್ಳಲಿದೆ.

https://twitter.com/ANI/status/1670760129917251584?ref_src=twsrc%5Egoogle%7Ctwcamp%5Eserp%7Ctwgr%5Etweet

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read