HomeKarnatakaBIG NEWS: ರಾಜ್ಯಪಾಲರಿಂದ ಸುಳ್ಳು ಹೇಳಿಸಿದ ಸರ್ಕಾರ; ವಿಧಾನಸಭೆಯಲ್ಲಿ ಸುಳ್ಳಿನ ಪಟ್ಟಿ ನೀಡಿದ ಮಾಜಿ ಸಿಎಂ...

BIG NEWS: ರಾಜ್ಯಪಾಲರಿಂದ ಸುಳ್ಳು ಹೇಳಿಸಿದ ಸರ್ಕಾರ; ವಿಧಾನಸಭೆಯಲ್ಲಿ ಸುಳ್ಳಿನ ಪಟ್ಟಿ ನೀಡಿದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಲೆ ವಿಧಾನಸಭೆಯಲ್ಲಿ ಕಾವೇರಿದ ಚರ್ಚೆ ನಡೆದಿದ್ದು, ರಾಜ್ಯ ಪಾಲರ ಮೂಲಕ ಸರ್ಕಾರ ಸುಳ್ಳು ಹೇಳಿಸಿದೆ ಎಂಬ ವಿಪಕ್ಷ ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರಿಂದ ನಾವು ಯಾವುದೇ ಸುಳ್ಳು ಹೇಳಿಸಿಲ್ಲ. ನಾವು ಜಾರಿಗೆ ತಂದ ಗ್ಯಾರಂಟಿ ಯೋಜನೆಗಳು, ಜನರಿಗೆ ಕೊಟ್ಟ ಭರವಸೆಗಳನ್ನು ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ ಈಡೇರಿಸಿದ್ದೇವೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ನೀವು ಹೇಳಿದ ಸುಳ್ಳಿನ ಪಟ್ಟಿ ಇಲ್ಲಿದೆ ಎಂದು ಸರ್ಕಾರದ ಸುಳ್ಳಿನ ಬಗ್ಗೆ ಮಾಹಿತಿ ನೀಡಿದರು.

ರಾಜ್ಯದ 8.65 ಲಕ್ಷ ಹಾಲು ಉತ್ಪಾದಕರಿಗೆ 757 ಕೋಟಿ ರೂ. ಪ್ರೋತ್ಸಾಹ ಧನ ನೇರವಾಗಿ ವರ್ಗಾವಣೆ ಮಾಡಲಾಗಿದೆ ಎಂದು ರಾಜ್ಯಪಾಲರಿಂದ ಸುಳ್ಳು ಹೇಳಿಸಿದ್ದು, ಆರು ತಿಂಗಳಿಂದ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಬಿಡುಗಡೆ ಮಾಡಿಲ್ಲ. ಹಾಲು ಉತ್ಪಾದಕರು ಕಳೆದ ಆರು ತಿಂಗಳಿನಿಂದ ಯಾವುದೇ ಪ್ರೋತ್ಸಾಹ ಧನ ಬಂದಿಲ್ಲ ಅಂತ ಪ್ರತಿಭಟನೆ ಮಾಡುತ್ತಿದ್ದಾರೆ. ಸರ್ಕಾರ ಈ ವಿಚಾರದಲ್ಲೂ ರಾಜ್ಯಪಾಲರಿಂದ ಸುಳ್ಳು ಹೇಳಿಸಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಐದು ಗ್ಯಾರೆಂಟಿ ಯೋಜನೆಗಳ ಜೊತೆಗೆ ಬಜೆಟ್ ನಲ್ಲಿ ಘೋಷಿಸಿರುವ ಶೇ 97 ರಷ್ಟು ಘೋಷಣೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ ಅಂತ ಹೇಳಿಸಿದ್ದೀರಿ. ಸರ್ಕಾರ ಅಧಿಸೂಚನೆ ಹೊರಡಿಸಿರುವ ಯೋಜನೆಗಳು ಆರಂಭವೇ ಆಗಿಲ್ಲ ಅದು ಸಳ್ಳಲ್ಲವಾ? ಎಂದು ಪ್ರಶ್ನಿಸಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ ಒಂದೂ ಹೊಸ ಬಸ್ ಖರೀದಿ ಮಾಡಿಲ್ಲ ಎಂದು ಸುಳ್ಳು ಹೇಳಿಸಿದ್ದೀರಿ. ಬಿಜೆಪಿ ಅವಧಿಯಲ್ಲಿ ನಾಲ್ಕು ನಿಗಮಗಳಿಗೆ ಬಸ್ ಖರೀದಿ ಮಾಡಲಾಗಿದೆ.
2022-23ನೇ ಸಾಲಿನಲ್ಲಿ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ ಒಟ್ಟು 3,526, ಹೊಸ ಬಸ್ಸುಗಳನ್ನು ಸೇರ್ಪಡೆ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ. ನಮ್ಮ ಅವಧಿಯಲ್ಲಿ ಬಿಎಂಟಿಸಿಗೆ 1,311 ಮತ್ತು ಕೆ ಎಸ್ ಆರ್ ಟಿಸಿಗೆ 50 ಪವರ್ ಪ್ಲಸ್ ಬಸ್ಸುಗಳು ಹಾಗೂ 20 ವೊಲ್ವೊ ಬಸ್ ಗಳನ್ನು ಖರೀದಿಸಿದ್ದು, ಅವುಗಳು ಕಾರ್ಯಾಚರಣೆ ಪ್ರಾರಂಭಿಸಿದ್ದವು ಎಂದು ತಿರುಗೇಟು ನೀಡಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 3000 ಕೋಟಿ ಮೀಸಲಿಟ್ಟಿದ್ದು, ಸರ್ಕಾರ ಈಗಾಗಲೇ 5468 ಕಾಮಗಾರಿಗಳಿಗೆ ಕ್ರಿಯಾ ಯೋಜನೆ ಮಂಜೂರು ಮಾಡಿ, ನವೆಂಬರ್ ಹೊತ್ತಿಗೆ 1287 ಕಾಮಗಾರಿ ಪೂರ್ಣಗೊಂಡಿವೆ ಎಂದು ಹೇಳಿದ್ದಾರೆ. ನಮ್ಮ ಕಾಲದಲ್ಲಿ ಅನುಮೋದನೆಗೊಂಡ ಯೋಜನೆಗಳನ್ನು ನಿಮ್ಮ ಸಾಧನೆ ಅಂತ ಹೇಳಿಕೊಂಡಿದ್ದು ಸುಳ್ಳಲ್ಲವೇ? ಎಂದು ಪ್ರಶ್ನಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular