HomeKarnatakaBIG NEWS: ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಬಿಜೆಪಿ ಮುಖಂಡನಿಗೆ ಚಾಕು ಇರಿತ ಪ್ರಕರಣ; ಸದನದ ಬಾವಿಗಿಳಿದು ವಿಪಕ್ಷ...

BIG NEWS: ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಬಿಜೆಪಿ ಮುಖಂಡನಿಗೆ ಚಾಕು ಇರಿತ ಪ್ರಕರಣ; ಸದನದ ಬಾವಿಗಿಳಿದು ವಿಪಕ್ಷ ಸದಸ್ಯರ ಪ್ರತಿಭಟನೆ

ಬೆಳಗಾವಿ: ಬೆಳಗಾವಿ ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಹಲ್ಲೆ ಪ್ರಕರಣ ಖಂಡಿಸಿ ಬಿಜೆಪಿ-ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ವಿಧಾನಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪೃಥ್ವಿ ಸಿಂಗ್ ಮೇಲೆ ಹಲ್ಲೆ ಪ್ರಕರಣದ ವಿಷಯ ಪ್ರಸ್ತಾಪಿಸಿದರು. ಗೃಹ ಸಚಿವರು ಬಂದಾಗ ಈ ಬಗ್ಗೆ ಉತ್ತರ ಕೊಡಿಸುವುದಾಗಿ ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದಕ್ಕೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬಂದ ಬಳಿಕ ಉತ್ತರ ಕೊಡಿಸುತ್ತೇವೆ ಎಂದು ಸ್ಪಷ್ಟಪಡಿಸಿದರು. ಆದರೂ ಸಿಟ್ಟಿಗೆದ್ದ ಬಿಜೆಪಿ ಹಾಗೂ ಜೆಡಿಎಸ್ ಸದದ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ಇದೇ ವೇಳೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುವಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular