HomeLive Newsಶಾಸಕರು ಕೇಳಿದ ಲಿಖಿತ ಪ್ರಶ್ನೆಗಳಿಗೆ ಉತ್ತರಿಸಲು ಸಚಿವರು ವಿಫಲ: ಅಸಮಾಧಾನಗೊಂಡು ಕಲಾಪ ನಡೆಸದೇ ಹೊರ ನಡೆದ...

ಶಾಸಕರು ಕೇಳಿದ ಲಿಖಿತ ಪ್ರಶ್ನೆಗಳಿಗೆ ಉತ್ತರಿಸಲು ಸಚಿವರು ವಿಫಲ: ಅಸಮಾಧಾನಗೊಂಡು ಕಲಾಪ ನಡೆಸದೇ ಹೊರ ನಡೆದ ಸ್ಪೀಕರ್ ಖಾದರ್

ಬೆಂಗಳೂರು: ವಿಧಾನಸಭೆ ಕಲಾದ ವೇಳೆ ಶಾಸಕರು ಕೇಳಿದ ಲಿಖಿತ ಪ್ರಶ್ನೆಗಳಿಗೆ ಉತ್ತರಿಸಲು ಸಚಿವರು ವಿಫಲರಾದ ಹಿನ್ನೆಲೆಯಲ್ಲಿ ಸಚಿವರುಗಳ ವಿರುದ್ಧ ತೀವ್ರ ಅಸಮಾಧಾನಗೊಂಡ ಸ್ಪೀಕರ್ ಯು.ಟಿ.ಖಾದರ್ ಕಲಾಪ ನಡೆಸದೇ ಪೀಠದಿಂದ ಎದ್ದು ಹೊರ ನಡೆದ ಘಟನೆ ನಡೆದಿದೆ.

ಶಸಾಕರ ಪ್ರಶ್ನೆಗಳಿಗೆ ಉತ್ತರಿಸಲು ವಿಫಲಾರದ ಸಚಿವರ ಕಾರ್ಯ ವೈಖರಿ ಕಂಡು ಸ್ಪೀಕರ್ ಯು.ಟಿ.ಖಾದರ್ ಗರಂ ಆದರು. 230 ಲಿಖಿತ ಪ್ರಶ್ನೆಗಳ ಪೈಕಿ 84 ಪ್ರಶ್ನೆಗಳಿಗೆ ಮಾತ್ರ ಉತ್ತರ ಬಂದಿದೆ. ಉತ್ತರಗಳನ್ನು ನೀಡುವಂತೆ ಮೊನ್ನೆಯೇ ಸಚಿವರು ಹಾಗೂ ಸರ್ಕಾರಕ್ಕೆ ಹೇಳಿದ್ದೇವೆ. ಸದನ ನಡೆಸುವುದು ಮಂತ್ರಿಗಳಿಗಾಗಿ ಅಲ್ಲ, ಶಾಸಕರ ಸಮಸ್ಯೆಗಳಿಗಾಗಿ. ಎಲ್ಲಾ ಪಕ್ಷಗಳ ಶಾಸಕರು ಪ್ರಶ್ನೆಗಳನ್ನು ಕೇಳುತ್ತಾರೆ. ನಿಯಮಾವಳಿಗಳ ಪ್ರಕಾರ ಕೇಳಿದ ಪ್ರಶ್ನೆಗಳಿಗೆ ಸರ್ಕಾರ ಉತ್ತರ ಕೊಡಲಿಲ್ಲವೆಂದರೆ ಹೇಗೆ? ಹೀಗಾದರೆ ಶಾಸಕರು ಸದನಕ್ಕೆ ಯಾಕೆ ಬರಬೇಕು? ಎಂದು ಪ್ರಶ್ನಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರಿಯಾದ ಸಮಯಕ್ಕೆ ಸಚಿವರು ಸದನಕ್ಕೆ ಬರುತ್ತಿಲ್ಲ. ಈ ಹಿಂದೆಯೂ ಈ ಬಗ್ಗೆ ಸೂಚನೆ ನೀಡಿದ್ದೇನೆ. ಈಗಾಗಲೇ ನಾಲ್ಕು ಬಾರಿ ಸೂಚನೆ ನೀಡಿದ್ದೇನೆ. ಇಂದೂ ಸೇರಿ ಐದನೇ ಬಾರಿಯೂ ಸುಧಾರಿಸದಿದ್ದರೆ ಏನು ಮಾಡುವುದು? ಹೀಗಾದರೆ ಸದನ ನಡುವುದಾದರೂ ಹೇಗೆ? ಸಚಿವರು ಬಂದು ಸ್ಪಷ್ಟನೆ ನೀಡುವವರೆಗೂ ಸದನ ನಡೆಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಸ್ಪೀಕರ್ ಸದನದಿಂದ ಎದ್ದು ಹೊರನಡೆದರು.

ಸರ್ಕಾರ ಹಾಗೂ ಸಚಿವರ ವೈಖರಿಗೆ ಅಸಮಾಧಾನಗೊಂದಿರುವ ಸ್ಪೀಕರ್ ಯು.ಟಿ,ಖಾದರ್ ಅವರನ್ನು ಸಮಾಧಾನ ಪಡಿಸಲು ಗೃಹ ಸಚಿವ ಪರಮೇಶ್ವರ್ ಹಾಗೂ ಇತರ ಸಚಿವರು ಯತ್ನಿಸಿದ್ದಾರೆ. ಸ್ಪೀಕರ್ ಕಚೇರಿಗೆ ತೆರಳಿ ಮನವೊಲಿಸಲು ಯತ್ನ ನಡೆಸಿದ್ದಾರೆ. ಆದಗ್ಯೂ ಸ್ಪೀಕರ್ ಅಸಮಾಧಾನ ಶಮನಗೊಂಡಿಲ್ಲ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular