HomeKarnatakaBIG NEWS: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ: ಸಿಡಿದೆದ್ದ ಬಿಜೆಪಿ ಕಾರ್ಯಕರ್ತರು; ಕಾಂಗ್ರೆಸ್ ಕಚೇರಿಗೆ...

BIG NEWS: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ: ಸಿಡಿದೆದ್ದ ಬಿಜೆಪಿ ಕಾರ್ಯಕರ್ತರು; ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನ

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪ ಪ್ರಕರಣ ರಾಜ್ಯಾದ್ಯಂತ ಆಕ್ರೋಶಕ್ಕೆ ವ್ಯಕ್ತವಾಗಿದೆ. ಘಟನೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಸಿಡಿದೆದ್ದು ಪ್ರತಿಭಟನೆ ನಡೆಸಿದ್ದಾರೆ.

ಮಂಗಳೂರಿನ ಮಲ್ಲಿಕಟ್ಟೆ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಸರ್ಕಾರದ ವಿರುದ್ಧ ಹಾಗೂ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಬ್ಯಾರಿಕೇಡ್ ಗಳನ್ನು ತಳ್ಳಿ ಕಾಂಗ್ರೆಸ್ ಕಚೇರಿಗೆ ಮುನ್ನುಗ್ಗಲು ಯತ್ನಿಸಿದ್ದಾರೆ. ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿದೆ. ರಾಜ್ಯದಲ್ಲಿ ಆತಂಕದ ವಾತಾವರಣವಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular