HomeKarnatakaBIG NEWS: ಪಾಕ್ ಪರ ಘೋಷಣೆ ಕೂಗಿದ್ದು ಸಾಬೀತಾದ್ರೆ ಅಂತವರ ವಿರುದ್ಧ ಕಠಿಣ ಕ್ರಮ; ಸಿಎಂ...

BIG NEWS: ಪಾಕ್ ಪರ ಘೋಷಣೆ ಕೂಗಿದ್ದು ಸಾಬೀತಾದ್ರೆ ಅಂತವರ ವಿರುದ್ಧ ಕಠಿಣ ಕ್ರಮ; ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ರಾಜ್ಯಸಭಾ ಚುನಾವಣೆ ಫಲಿತಾಂಶದ ಬಳಿಕ ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಆರೋಪ ಕೇಳಿಬಂದಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ತನಿಖೆಗೆ ಆದೇಶ ನೀಡಿದೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ಸಾಬೀತಾದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂಬ ವಿಡಿಯೋವನ್ನು ಎಫ್ ಎಸ್ ಎಲ್ ಗೆ ಕಳುಹಿಸಲಾಗಿದೆ. ಶೀಘ್ರವೇ ವರದಿ ಬರಲಿದೆ. ಪಾಕ್ ಪರ ಘೋಷಣೆ ಕೂಗಿದ್ದು ಸಾಬೀತಾದ್ರೆ ಅಂತವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಕಠಿಣ ಕ್ರಮ ಕೈಗೊಳ್ಳಲಾಗುವುದು. ರಾಷ್ಟ್ರದ್ರೋಹಿ ಘೋಷಣೆ ಕೂಗಿದವರನ್ನು ಯಾವ ಕಾರಣಕ್ಕೂ ರಕ್ಷಿಸಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular