BIG NEWS: ತೆರಿಗೆ ಬಾಕಿ ಹಿನ್ನೆಲೆ: ವಿಧಾನಸೌಧ, ರಾಜಭವನ ಸೇರಿದಂತೆ 258 ಸರ್ಕಾರಿ ಕಟ್ಟಡಗಳಿಗೆ BBMP ನೋಟಿಸ್ ಜಾರಿ

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ವಿಧಾನಸೌಧ, ರಾಜಭವನ ಸೇರಿದಂತೆ 258 ಸರ್ಕಾರಿ ಕಟ್ಟಡಗಳಿಗೆ ಬಿವಿಎಂಪಿ ನೋಟಿಸ್ ಜಾರಿ ಮಾಡಿದೆ.

ರಾಜ್ಯಾದ್ಯಂತ ಬಹುತೇಕ ಸರ್ಕಾಅರಿ ಇಲಕಹೆಗಳು ಬರೋಬ್ಬರಿ 8 ಸಾವಿರ ಕೋಟಿ ರೂ ಗಳನ್ನು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಇದರ ಬೆನ್ನಲ್ಲೇ ತೆರಿಗೆ ಬಾಕಿ ಸ್ಫೋಟಕ ಅಂಶ ಬಯಲಾಗಿದೆ.

ವಿಧಾನಸೌಧ, ವಿಕಾಸಸೌಧ, ರಾಜಭವನ ಸೇರಿದಂತೆ ಅನೇಕ ಸರ್ಕಾರಿ ಕಟ್ಟಡಗಲು ಕೋಟಿಗಟ್ಟಲೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿವೆ. ಈಗಾಗಲೇ ನೋಟಿಸ್ ನೀಡಲಾಗಿದೆ. ಅವುಗಳಲ್ಲಿ ಕೆಲ ಕಟ್ಟಡಗಳು 17 ವರ್ಷಗಳಿಂದ ತೆರಿಗೆ ಬಾಕಿ ಉಳಿಸಿಕೊಂಡಿವೆ. ಈ ಹಿನ್ನೆಲೆಯಲ್ಲಿ ಆಯಾ ಇಲಾಖೆ ಮುಖ್ಯಸ್ಥರಿಗೆ ತೆರಿಗೆ ಪಾವತಿಸುವಂತೆ ಪಾಲಿಕೆ ನೋಟಿಸ್ ನೀಡಿದೆ.

ತೆರುಗೆ ಪಾವತಿ ಮಾಡದಿದ್ದರೆ ಈ ಬಗ್ಗೆ ಸರ್ಕಾರಕ್ಕೆ ಗಮನಕ್ಕೆ ತರಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read