HomeKarnatakaವಿಧಾನಸೌಧದಲ್ಲಿ ಮತ್ತೆ ಹಾವು ಪ್ರತ್ಯಕ್ಷ...!

ವಿಧಾನಸೌಧದಲ್ಲಿ ಮತ್ತೆ ಹಾವು ಪ್ರತ್ಯಕ್ಷ…!

ಬೆಂಗಳೂರು: ರಾಜ್ಯದ ಆಡಳಿತ ಕೇಂದ್ರ ವಿಧಾನಸೌಧದಲ್ಲಿ ಮತ್ತೆ ಹಾವು ಪ್ರತ್ಯಕ್ಷವಾಗಿದೆ. ಕೆಲ ದಿನಗಳ ಹಿಂದೆ ವಿಧಾನಸೌಧದ ದಾಖಲೆಗಳಿರುವ ಕೊಠಡಿಯಲ್ಲಿ ಹಾವು ಕಾಣಿಸಿಕೊಂಡು ಸಿಬ್ಬಂದಿಗಳನ್ನು ಬೆಚ್ಚಿ ಬೀಳುವಂತೆ ಮಾಡಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ಮತ್ತೆ ವಿಧಾನಸೌಧದಲ್ಲಿ ಹಾವು ಪ್ರತ್ಯಕ್ಷವಾಗಿದೆ.

ವಿಧಾನಸೌಧದ ಪಶ್ಚಿಮ ದ್ವಾರದ ಮೆಟ್ಟಿಲುಗಳ ಮೇಲೆ ಹಾವು ಕಾಣಿಸಿಕೊಂಡಿದೆ. ಮೆಟ್ಟಿಲು ಮೇಲೆ ಕಾಣಿಸಿಕೊಂಡ ಹಾವು ಬಳಿಕ ಕಟ್ಟಡದ ಪಕ್ಕದ ಬಿಲವನ್ನು ಸೇರಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಗರಪಂಚಮಿ ಹಿಂದಿನ ದಿನವೇ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಾವು ಕಾಣಿಸಿಕೊಂಡಿರುವುದಕ್ಕೆ ಹಲವು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇನ್ನು ನಿನ್ನೆ ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಹಾವು ಕಾಣಿಸಿಕೊಂಡಿತ್ತು ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular