HomeUncategorizedBREAKING: ಪೊಲೀಸರ ವಿರುದ್ಧ ಕಿರುಕುಳ ಆರೋಪ: ವಿಧಾನಸೌಧದ ಮುಂದೆ ವಿಷಸೇವಿಸಿದ ಡಾ.ನಾಗೇಂದ್ರಪ್ಪ ಆತ್ಮಹತ್ಯೆಗೆ ಯತ್ನ

BREAKING: ಪೊಲೀಸರ ವಿರುದ್ಧ ಕಿರುಕುಳ ಆರೋಪ: ವಿಧಾನಸೌಧದ ಮುಂದೆ ವಿಷಸೇವಿಸಿದ ಡಾ.ನಾಗೇಂದ್ರಪ್ಪ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿ ವಿಧಾನಸೌಧದ ಮುಂದೆ ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಡಾ.ನಾಗೇಂದ್ರಪ್ಪ ಶಿರೂರ್ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಸೋಲದೇವನಹಳ್ಳಿಯಲ್ಲಿ ಸಮಸ್ಯೆಯಾಗಿದೆ ಎಂದು ಡಾ.ನಾಗೇಂದ್ರಪ್ಪ ಶಿರೂರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ತೀವ್ರ ಅಸ್ವಸ್ಥರಾಗಿದ್ದ ನಾಗೇಂದ್ರಪ್ಪ ಅವರನ್ನು ಪೊಲೀಸರು ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಾ.ನಾಗೇಂದ್ರಪ್ಪ ಹಾಗೂ ರಾಷ್ಟ್ರ ರಕ್ಷಣಾ ಸೇನೆಯ ಮುಖಂಡ ಪುನೀತ್ ಕೆರೆಹಳ್ಳಿ ಇಬ್ಬರು ಸೇರಿ ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧವೂ ಕೇಸ್ ದಾಖಲಾಗಿತ್ತು. ಸೋಲದೇವನಹಳ್ಳಿ ಠಾಣೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಡಾ.ನಾಗೇಂದ್ರಪ್ಪ ಆರೋಪಿಸಿದ್ದರು.

ಇದೇ ವಿಚಾರವಾಗಿ ಇಂದು ವಿಧಾನಸೌಧದ ಬಳಿ ಬಂದ ನಾಗೇಂದ್ರಪ್ಪ, ಸೋಲದೇವನಹಳ್ಳಿಯಲ್ಲಿ ಸಮಸ್ಯೆಯಾಗಿದೆ. ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಪೊಲೀಸರು ಆತನ ಕೈಲಿದ್ದ ವಿಷದ ಬಾಟಲ್ ಕಿತ್ತುಕೊಂಡಿದ್ದಾರೆ, ಅಸ್ವಸ್ಥನಾಗಿದ್ದ ನಾಗೇಂದ್ರಪ್ಪ ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular