HomeKarnatakaವಿಧಾನಸಭೆ ಕಾರ್ಯಕಲಾಪದಲ್ಲಿ ತಾರತಮ್ಯ: ಸ್ಪೀಕರ್ ಗೆ ಪತ್ರ ಬರೆದ ಆರ್.ಅಶೋಕ್; ವಾರ್ತಾ ಇಲಾಖೆ ಅಧಿಕಾರಿಗಳ ವಿರುದ್ಧ...

ವಿಧಾನಸಭೆ ಕಾರ್ಯಕಲಾಪದಲ್ಲಿ ತಾರತಮ್ಯ: ಸ್ಪೀಕರ್ ಗೆ ಪತ್ರ ಬರೆದ ಆರ್.ಅಶೋಕ್; ವಾರ್ತಾ ಇಲಾಖೆ ಅಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಎಚ್ಚರಿಕೆ

ಬೆಂಗಳೂರು: ವಿಧಾನಸಭೆಯ ಕಾರ್ಯಕಲಾಪದಲ್ಲಿ ತಾರತಮ್ಯ ನಡೆಸಲಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದು, ಈ ಬಗ್ಗೆ ಸ್ಪೀಕರ್ ಜಿ.ಎಸ್.ಪಾಟೀಲ್ ಅವರಿಗೆ ಪತ್ರ ಬರೆದಿದ್ದಾರೆ.

ವಿಪಕ್ಷ ನಾಯಕರು ಮತ್ತು ವಿಪಕ್ಷ ಶಾಸಕರ ಹೇಳಿಕೆಗಳ ಫೋಟೋ, ವೀಡಿಯೋಗಳನ್ನು ಮಾಧ್ಯಮಗಳಿಗೆ ವಾರ್ತಾ ಇಲಾಖೆ ಅಧಿಕಾರಿಗಳು ಬಿಡುಗಡೆ ಮಾಡುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್​. ಅಶೋಕ್​​ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ವಾರ್ತಾ ಇಲಾಖೆಗೆ ನಿರ್ದೇಶನ ನೀಡಿ. ಇಲ್ಲದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸೋದಾಗಿ ಉಲ್ಲೇಖಿಸಿ ವಿಧಾನಸಭೆ ಸ್ಪೀಕರ್​​​ಗೆ ಪತ್ರ ಬರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಗಸ್ಟ್​​ 13ರಿಂದ ಮಳೆಗಾಲದ ಅಧಿವೇಶನ ನಡೆಯುತ್ತಿದ್ದು, ವಿಧಾನಸಭೆಯ ಕಾರ್ಯಕಲಾಪಗಳಲ್ಲಿ ವಿರೋಧ ಪಕ್ಷದ ನಾಯಕರು ಮತ್ತು ಶಾಸಕರು ನೀಡುವ ಹೇಳಿಕೆಗಳು, ಭಾಷಣಗಳು ಹಾಗೂ ಧ್ವನಿ-ದೃಶ್ಯ/ವೀಡಿಯೋಗಳು ಮುದ್ರಣ ಹಾಗೂ ಟಿವಿ ಮಾಧ್ಯಮಗಳಲ್ಲಿ ಸಮರ್ಪಕವಾಗಿ ಪ್ರಸಾರವಾಗುತ್ತಿಲ್ಲ. ಮುಖ್ಯಮಂತ್ರಿಗಳು, ಸಚಿವರು ಹಾಗೂ ಆಡಳಿತ ಪಕ್ಷದ ಶಾಸಕರ ಹೇಳಿಕೆಗಳಿಗೆ ಹೆಚ್ಚಿನ ಪ್ರಚಾರ ದೊರೆಯುತ್ತಿದೆ . ಆ ಮೂಲಕ ವಿಧಾನಸಭೆಯ ಕಾರ್ಯಕಲಾಪಗಳಲ್ಲಿ ತಾರತಮ್ಯ ನಡೆಯುತ್ತಿದೆ. ವಿಧಾನಸಭೆಯ ಕಾರ್ಯಕಲಾಪಗಳಲ್ಲಿ ಈ ರೀತಿಯ ತಾರತಮ್ಯವು ಹಿಂದೆಂದು ನಡೆದಿರುವುದಿಲ್ಲ ಎಂದು ಆರೋಪಿಸಿದ್ದಾರೆ.

ತಾವು ಕೂಡಲೇ ಸಂಬಂಧಿಸಿದ ವಾರ್ತಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿ, ಈ ತಾರತಮ್ಯವನ್ನು ಸರಿಪಡಿಸಲು ಕೋರುತ್ತೇನೆ. ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸಲಾಗುವುದು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular