HomeKarnatakaBIG NEWS : ಅಮಾನತುಗೊಂಡ ಬಿಜೆಪಿ ಶಾಸಕರನ್ನು ಹೊತ್ತು ಹೊರ ಹಾಕಿದ ಮಾರ್ಷಲ್ ಗಳು

BIG NEWS : ಅಮಾನತುಗೊಂಡ ಬಿಜೆಪಿ ಶಾಸಕರನ್ನು ಹೊತ್ತು ಹೊರ ಹಾಕಿದ ಮಾರ್ಷಲ್ ಗಳು

ಬೆಂಗಳೂರು: ಸದನಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ವಿಧಾನಸಭೆಯಿಂದ ಬಿಜೆಪಿಯ 10 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ.

ಬಿಜೆಪಿಯ ಹತ್ತು ಶಾಸಕರ ವಿರುದ್ಧ ಶಿಸ್ತುಕ್ರಮ ಕೈಗೊಂಡು ಅಮಾನತು ಆದೇಶ ಹೊರಡಿಸುತ್ತಿದ್ದಂತೆ, ಸಸ್ಪೆಂಡ್ ಆದ ಬಿಜೆಪಿ ಸದಸ್ಯರನ್ನು ಸದನದಿಂದ ಹೊರ ಹಾಕಲು ಮಾರ್ಷಲ್ ಗಳು ಎಂಟ್ರಿಕೊಟ್ಟಿದ್ದಾರೆ. ಈ ವೇಳೆ ಅಮಾನತುಗೊಂಡಿರುವ ಶಾಸಕರನ್ನು ಬಲವಂತವಾಗಿ ಹೊರಹಾಕದಂತೆ ಬಿಜೆಪಿಯ ಉಳಿದ ಸದಸ್ಯರು ತಡೆಗೋಡೆಯಾಗಿ ನಿಂತು ತಡೆಯಲು ಯತ್ನಿಸಿದ ಘಟನೆ ನಡೆದಿದೆ.  ಆದರೂ ಕೂಡ ಮಾರ್ಷಲ್ ಗಳು ಅಮಾನತುಗೊಂಡ ಸದಸ್ಯರನ್ನು ಹೊತ್ತುಕೊಂಡು ಹೋಗಿ ಹೊರಹಾಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧಾನಸಭೆ ಕಲಾಪದ ವೇಳೆ ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಶಿಷ್ಠಾಚಾರ ಉಲ್ಲಂಘನೆ ಆರೋಪ ಮಾಡಿ ಸದನದಲ್ಲಿ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ವಿಧೇಯಕಗಳನ್ನು ಹರಿದು ಡೆಪ್ಯೂಟಿ ಸ್ಪೀಕರ್ ಮೇಲೆ ತೂರಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸದನಕ್ಕೆ ಅಗೌರವ ತೋರಿದ ಕಾರಣಕ್ಕೆ ಬಿಜೆಪಿಯ ಹತ್ತು ಶಾಸಕರನ್ನು ಅಧಿವೇಶನದಿಂದ ಅಮಾನತುಗೊಳಿಸಿ ಸ್ಪೀಕರ್ ಖಾದರ್ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ಸದಸ್ಯರಾದ ಆರ್.ಅಶೋಕ್, ಡಾ.ಅಶ್ವತ್ಥನಾರಾಯಣ, ಸುನೀಲ್ ಕುಮಾರ್, ಅರವಿಂದ್ ಬೆಲ್ಲದ್, ವೇದವ್ಯಾಸ್ ಕಾಮತ್, ಧೀರಜ್ ಮುನಿರಾಜು, ಯಶ್ ಪಾಲ್ ಸುವರ್ಣ, ಉಮಾನಾಥ್ ಕೋಟ್ಯಾನ್, ಅರಗ ಜ್ಞಾನೇಂದ್ರ, ಭರತ್ ಶೆಟ್ಟಿ ಸೇರಿದಂತೆ 10 ಸದಸ್ಯರು ಅಮಾನತುಗೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular