HomeKarnatakaಪೇಜಾವರ ಶ್ರೀಗಳ ಪೂರ್ವಾಶ್ರಮದ ಸಹೋದರ ವಿದ್ವಾನ್ ರಾಮಚಂದ್ರ ಭಟ್ ವಿಧಿವಶ

ಪೇಜಾವರ ಶ್ರೀಗಳ ಪೂರ್ವಾಶ್ರಮದ ಸಹೋದರ ವಿದ್ವಾನ್ ರಾಮಚಂದ್ರ ಭಟ್ ವಿಧಿವಶ

ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿದ್ವಾನ್ ರಾಮಚಂದ್ರ ಭಟ್ ವಿಧಿವಶರಾಗಿದ್ದಾರೆ.

72 ವರ್ಷದ ರಾಮಚಂದ್ರ ಭಟ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಪೇಜಾವರ ಮಠದ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿದ್ದ ಅವರು ಅಲ್ಲಿಯೇ ಕೊನೆಯುಸಿರೆಳಿದಿದ್ದಾರೆ.

ಜ್ಯೋತಿಷ್ಯ, ವೇದಾಂತ ಶಾಸ್ತ್ರಗಳಲ್ಲಿ ಪಾರಂಗತರಾಗಿದ್ದ ರಾಮಚಂದ್ರ ಭಟ್ಟರು ಪತ್ನಿ, ಓರ್ವ ಪುತ್ರ, ಸಹೋದರ ಹಾಗೂ ಸಹೋದರಿಯರನ್ನು ಅಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular