HomeLatest NewsGOOD NEWS : ‘ವಿದ್ಯಾಸಿರಿ’ ವಿದ್ಯಾರ್ಥಿ ವೇತನ 2000 ರೂ.ಗೆ ಹೆಚ್ಚಳ : CM ಸಿದ್ದರಾಮಯ್ಯ...

GOOD NEWS : ‘ವಿದ್ಯಾಸಿರಿ’ ವಿದ್ಯಾರ್ಥಿ ವೇತನ 2000 ರೂ.ಗೆ ಹೆಚ್ಚಳ : CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಕೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳು ಶಿಕ್ಷಣವಂತರಾಗಬೇಕು. ಇದಕ್ಕೇ ವಿದ್ಯಾಸಿರಿ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಒಂದೂವರೆ ಸಾವಿರದಿಂದ ಎರಡು ಸಾವಿರ ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಘೋಷಿಸಿದರು.

12ನೇ ಶತಮಾನದಲ್ಲೇ ಮಡಿವಾಳ ಮಾಚಿ ದೇವರು ಬಸವಣ್ಣನವರ ಜೊತೆ ಸೇರಿ ಸಮಾಜದ ಬದಲಾವಣೆಗೆ ಮುಂದಾಗಿದ್ದರು. ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನತೆ ಇದೆ. ಈ ಕಾರಣಕ್ಕೆ ಉದ್ಯೋಗ, ಶಿಕ್ಷಣ ಸಿಗದೆ ಆರ್ಥಿಕ ಅಸಮಾನತೆ ಹೆಚ್ಚಿ ಅಸಮಾನತೆ ಹೆಚ್ಚಾಯಿತು ಎಂದು ವಿವರಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸವಾದಿ ಶರಣರು ಜಾತಿಮುಕ್ತ ಮನುಷ್ಯ ಸಮಾಜ ನಿರ್ಮಾಣಕ್ಕೆ ಹೋರಾಡಿದ್ದರು. ಒಟ್ಟಿಗೆ ಕುಳಿತು ಊಟ ಮಾಡಲಾಗದ ಅನಿಷ್ಠ ಪದ್ಧತಿ ವಿರುದ್ಧ ಧ್ವನಿ ಎತ್ತಿ ಜಾತಿ ಅಸಮಾನತೆ ಅಳಿಸಲು ಹೋರಾಡಿದ್ದನ್ನು ಸ್ಮರಿಸಿದರು. ಎಲ್ಲಾ ಜಾತಿ, ಸಮುದಾಯಗಳ ಜಾತ್ಯತೀತ ಪ್ರತಿನಿಧಿಗಳನ್ನೊಳಗೊಂಡ ಅನುಭವ ಮಂಟಪದ ಉದ್ದೇಶವೇ ಜಾತಿ ಮುಕ್ತ ಸಮಾಜದ ನಿರ್ಮಾಣವಾಗಿತ್ತು ಎಂದರು.

ಮಡಿವಾಳ ಸಮುದಾಯದ ಮಕ್ಕಳು ಹೆಚ್ಚೆಚ್ಚು ಶಿಕ್ಷಣ ಪಡೆಯಬೇಕು ಎನ್ನುವ ಉದ್ದೇಶದಿಂದಲೇ ನಾವು ವಿದ್ಯಾಸಿರಿ ಯೋಜನೆ ಜಾರಿಗೆ ತಂದೆವು. ಈಗ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಎರಡು ಸಾವಿರಕ್ಕೆ ಹೆಚ್ಚಿಸಲಾಗುವುದು, ಜೊತೆಗೆ ಮಡಿವಾಳ ಸಮುದಾಯದ ಹಾಸ್ಟೆಲ್ ಗೆ ಅಗತ್ಯ ಸವಲತ್ತು ಒದಗಿಸಲಾಗುವುದು ಎಂದರು.

For Latest News Updates, Join Our Whatsapp Community🚩
RELATED ARTICLES

Most Popular