ನಟ ವಿಜಯ್ ರಾಘವೇಂದ್ರ ಪತ್ನಿ ‘ಸ್ಪಂದನಾ’ ವಿಧಿವಶ : ಮಾಜಿ ಸಿಎಂ BSY ಸೇರಿ ಹಲವು ಗಣ್ಯರ ಸಂತಾಪ

ಬೆಂಗಳೂರು: ಕನ್ನಡ ಚಿತ್ರರಂಗದ ನಟ, ನಿರೂಪಕ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಸಾವಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಂತಾಪ

ಸ್ಪಂದನಾ ಅಕಾಲಿಕ ನಿಧನ ಹೊಂದಿದ ಸುದ್ದಿ ಕೇಳಿ ತೀವ್ರ ಆಘಾತವಾಯಿತು.ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ. ದೇವರು ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ. ಓಂ ಶಾಂತಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದರು.

ಸಿಎಂ ಸಂತಾಪ

ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ. ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಅಕಾಲಿಕ ನಿಧನದ ವಾರ್ತೆ ಆಘಾತವನ್ನುಂಟುಮಾಡಿದೆ.ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.

ಡಿಸಿಎಂ ಸಂತಾಪ
ಈ ಕುರಿತು ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್ ಅವರು, ಕನ್ನಡದ ಖ್ಯಾತ ನಟ ಶ್ರೀ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಶ್ರೀಮತಿ ಸ್ಪಂದನಾ ರಾಘವೇಂದ್ರ ಅವರು ಬ್ಯಾಂಕಾಕ್ ನಲ್ಲಿ ದಿಢೀರ್ ಸಾವಿಗೀಡಾಗಿರುವ ಸಂಗತಿ ತಿಳಿದು ಅಪಾರ ನೋವುಂಟಾಯಿತು. ಇತ್ತೀಚೆಗಷ್ಟೇ ಅವರು ನನ್ನನ್ನು ಭೇಟಿಯಾಗಿ ಶುಭ ಹಾರೈಸಿದ್ದರು. ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ವರ್ಗದವರು ಹಾಗೂ ಸ್ನೇಹಿತ ವರ್ಗಕ್ಕೆ ನನ್ನ ಸಾಂತ್ವನಗಳು ಎಂದು ಹೇಳಿದ್ದಾರೆ.

ಸ್ಪಂದನಾ ನಿಧನಕ್ಕೆ ಸಚಿವ ದಿನೇಶ್ ಗುಂಡೂರಾವ್ ಸಂತಾಪ

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಸಚಿವ ದಿನೇಶ್ ಗುಂಡೂರಾವ್ ಫೇಸ್ ಬುಕ್ ನಲ್ಲಿ ಸಂತಾಪ ಸೂಚಿಸಿದ್ದಾರೆ.ನಟ ವಿಜಯ ರಾಘವೇಂದ್ರರವರ ಧರ್ಮಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾದ ಸುದ್ದಿ ಕೇಳಿ ಆಘಾತವಾಗಿದೆ. ಅತಿ ಸಣ್ಣ ವಯಸ್ಸಿಗೆ ಆಗುವ ಹೃದಯಾಘಾತದ ದುರ್ಘಟನೆಗಳು ನನ್ನ ಮನಸ್ಸನ್ನು ವಿಚಲಿತಗೊಳಿಸಿವೆ. ಸ್ಪಂದನಾರವರ ಸಾವು ಅನಿರೀಕ್ಷಿತ. ವಿಜಯ್ ರಾಘವೇಂದ್ರ ಕುಟುಂಬದ ಶೋಕದಲ್ಲಿ ನಾನೂ ಭಾಗಿ ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read