ಬೆಂಗಳೂರು : ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.
ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಅಕಾಲಿಕ ನಿಧನದ ವಾರ್ತೆ ಆಘಾತವನ್ನುಂಟುಮಾಡಿದೆ.ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.
https://twitter.com/CMofKarnataka/status/1688431876451774464
ಡಿಸಿಎಂ ಟ್ವೀಟ್
ಈ ಕುರಿತು ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್ ಅವರು, ಕನ್ನಡದ ಖ್ಯಾತ ನಟ ಶ್ರೀ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಶ್ರೀಮತಿ ಸ್ಪಂದನಾ ರಾಘವೇಂದ್ರ ಅವರು ಬ್ಯಾಂಕಾಕ್ ನಲ್ಲಿ ದಿಢೀರ್ ಸಾವಿಗೀಡಾಗಿರುವ ಸಂಗತಿ ತಿಳಿದು ಅಪಾರ ನೋವುಂಟಾಯಿತು. ಇತ್ತೀಚೆಗಷ್ಟೇ ಅವರು ನನ್ನನ್ನು ಭೇಟಿಯಾಗಿ ಶುಭ ಹಾರೈಸಿದ್ದರು. ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ವರ್ಗದವರು ಹಾಗೂ ಸ್ನೇಹಿತ ವರ್ಗಕ್ಕೆ ನನ್ನ ಸಾಂತ್ವನಗಳು ಎಂದು ಹೇಳಿದ್ದಾರೆ.
https://twitter.com/DKShivakumar/status/1688423789925892097?ref_src=twsrc%5Etfw%7Ctwcamp%5Etweetembed%7Ctwterm%5E1688423789925892097%7Ctwgr%5E301b344cedf1067eea42b96739fdb31c15bb167a%7Ctwcon%5Es1_&ref_url=https%3A%2F%2Fkannadadunia.com%2Flive-news%2Factor-vijayraghavendras-wife-spandana-passes-away-shivakumars-condolences%2F