HomeLatest NewsBREAKING: ನನ್ನ ಜೀವನದಲ್ಲಿ ಇಂತಹ ನೋವಿನ ಸ್ಥಿತಿ ನೋಡಿರಲಿಲ್ಲ: ಕಾಲ್ತುಳಿತ ಘಟನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ:...

BREAKING: ನನ್ನ ಜೀವನದಲ್ಲಿ ಇಂತಹ ನೋವಿನ ಸ್ಥಿತಿ ನೋಡಿರಲಿಲ್ಲ: ಕಾಲ್ತುಳಿತ ಘಟನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ: ಭಾವುಕರಾದ ನಟ ವಿಜಯ್

ಚೆನ್ನೈ: ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ತಮಿಳಿಗ ವೆಟ್ರಿ ಪಕ್ಷದ ಸಂಸ್ಥಾಪಕ, ನಟ ವಿಜಯ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ತಮಿಳುನಾಡಿನ ಕರೂರಿನಲ್ಲಿ ವಿಜಯ್ ಅವರ ರಾಜಕೀಯ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ್ದರು. ನೂರಾರು ಜನರು ಗಾಯಗೊಂಡಿದ್ದಾರೆ. ಈ ಘಟನೆ ಬಗ್ಗೆ ಇದೀಗ ಮೊದಲ ಬಾರಿಗೆ ವಿಜಯ್ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ನನ್ನ ಜೀವನದಲ್ಲಿ ಇಂತಹ ನೋವಿನ ಸ್ಥಿತಿ ನೋಡಿರಲಿಲ್ಲ. ಕಾಲ್ತುಳಿತ ದುರಂತದಿಂದ ಮನಸ್ಸಿಗೆ ತುಂಬಾ ನೋವಾಗಿದೆ. ನನ್ನನ್ನು ನೋಡಿ ಅಭಿಮಾನಿಗಳು ರ್ಯಾಲಿಗೆ ಬಂದಿದ್ದರು. ಈ ವೇಳೆ ಘಟನೆ ನಡೆದಿದೆ. ನನ್ನನ್ನು ಟಾರ್ಗೆಟ್ ಮಾಡಿ ಆದರೆ ಜನರನ್ನು ಟಾರ್ಗೆಟ್ ಮಾಡಬೇಡಿ ಎಂದು ತಮಿಳುನಾಡು ಸಿಎಂ ಸ್ಟಾಲಿನ್ ಅವರಿಗೆ ನೇರ ಎಚ್ಚರಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ಯಾಕೆ ಸಂಭಸಿತು? ಎಂಬುದು ಗೊತ್ತಾಗುತ್ತದೆ. ಶೀಘ್ರದಲ್ಲಿಯೇ ಎಲ್ಲಾ ಸತ್ಯ ಹೊರಬರಲಿದೆ ಎಂದು ಹೇಳಿದರು. ಅತಿ ಶೀಘ್ರದಲ್ಲಿ ಗಾಯಾಳುಗಳನ್ನು ಭೇಟಿಯಾಗಿ ಸಾಂತ್ವನ ಹೇಳುತ್ತೇನೆ.

ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ನನ್ನ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿಗಳೇ ನಾನು ನಿಮ್ಮಲ್ಲಿ ಒಂದು ವಿನಂತಿ ಮಾಡುತ್ತೇನೆ. ನೀವು ನನ್ನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಹುದು. ಆದರೆ ಕಾರ್ಯಕರ್ತರ ಮೇಲೆ ಅಲ್ಲ. ನನ್ನ ಟಿವಿಕೆ ಕಚೇರಿಗೆ ಬಂದು ಕ್ರಮ ಕೈಗೊಳ್ಳಬಹುದು. ದುರಂತದ ಬಗ್ಗೆ ಎಲ್ಲಾ ಸತ್ಯಗಳು ಶೀಘ್ರದಲ್ಲಿ ಹೊರಬರಲಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular