HomeKarnatakaBIG NEWS: ಉದ್ಯಮಿ ವಿಜಯ್ ಟಾಟಾಗೆ ಅಮೃತಹಳ್ಳಿ ಪೊಲೀಸರಿಂದ ನೊಟೀಸ್ ಜಾರಿ

BIG NEWS: ಉದ್ಯಮಿ ವಿಜಯ್ ಟಾಟಾಗೆ ಅಮೃತಹಳ್ಳಿ ಪೊಲೀಸರಿಂದ ನೊಟೀಸ್ ಜಾರಿ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಹಣಕ್ಕೆ ಬೇಡಿಕೆ ಹಾಗೂ ಜೀವ ಬೆದರಿಕೆ ಆರೋಪದಡಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಉದ್ಯಮಿ ವಿಜಯ್ ಟಾಟಾ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೃತಹಳ್ಳಿ ಠಾಣೆ ಪೊಲೀಸರು ವಿಜಯ್ ಟಾಟಾಗೆ ನೊಟೀಸ್ ಜಾರಿ ಮಾಡಿದ್ದಾರೆ. ಹೆಚ್.ಡಿ.ಕೆ ವಿರುದ್ಧದ ಆರೋಪಗಳ ಕುರಿತು ದಾಖಲೆಗಳನ್ನು ನೀಡುವಂತೆ ನೊಟೀಸ್ ನಲ್ಲಿ ತಿಳಿಸಲಾಗಿದೆ.

ಹೆಚ್.ಡಿ.ಕುಮಾರಸ್ವಾಮಿ 50 ಕೋಟಿ ಹಣಕ್ಕೆ ಬೇಡಿಕೆ ಹಾಗೂ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿ ಉದ್ಯಮಿ ವಿಜಯ್ ಟಾಟಾ ಬೆಂಗಳೂರಿನ ಅಮೃತಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ವಿಜಯ್ ಟಾಟಾ ದೂರು ದಾಖಲಿಸುತ್ತಿದ್ದಂತೆ ಅವರ ವಿರುದ್ಧವೂ ಪ್ರಕರಣ ದಾಖಲಾಗಿದೆ. ವಿಜಯ್ ಟಾಟಾ 100 ಕೋಟಿ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಎಡಿಎಸ್ ಮಾಜಿ ಸದಸ್ಯ ರಮೇಶ್ ಗೌಡ ಕೂದ ಅಮೃತಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular