HomeLatest NewsBREAKING: ವಿಜಯಲಕ್ಷ್ಮೀ ದರ್ಶನ್ ಬಗ್ಗೆ ಅಶ್ಲೀಲ ಕಮೆಂಟ್: FIR ದಾಖಲು

BREAKING: ವಿಜಯಲಕ್ಷ್ಮೀ ದರ್ಶನ್ ಬಗ್ಗೆ ಅಶ್ಲೀಲ ಕಮೆಂಟ್: FIR ದಾಖಲು

ಬೆಂಗಳೂರು: ನಟಿ, ಮಾಜಿ ಸಂಸದೆ ರಮ್ಯಾ ಬಳಿಕ ಇದೀಗ ವಿಜಯಲಕ್ಷ್ಮೀ ದರ್ಶನ್ ಬಗ್ಗೆಯೂ ಕಿಡಿಗೇಡಿಗಳು ಅಶ್ಲೀಲ ಕಮೆಂಟ್ ಮಾಡಿದ್ದು, ಈ ಬಗ್ಗೆ ಎಫ್ ಐ ಆರ್ ದಾಖಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ಮಗನ ಬಗ್ಗೆ ಅಸಭ್ಯವಾಗಿ ಕಮೆಂಟ್ ಮಾಡಲಾಗಿದ್ದು, ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು, ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರ ಬೆನ್ನಲ್ಲೇ ವಿಜಯಲಕ್ಷ್ಮೀ ದರ್ಶನ್ ಬಗ್ಗೆ ಕೆಟ್ಟ ಕಮೆಂಟ್ ವಿಚಾರವಾಗಿ ಚನ್ನಮ್ಮನ ಕೆರೆ ಅಚ್ಚುಕಟ್ಟು ಪ್ರದೇಶದ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಪೊಲೀಸರು ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular