BIG NEWS: ವಿಜಯಲಕ್ಷ್ಮೀ ದರ್ಶನ್ ಭೇಟಿ ಬಗ್ಗೆ ಕಾರಣ ತಿಳಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮೀ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ವಿಜಯಲಕ್ಷ್ಮೀ ದರ್ಶನ್ ಹಾಗೂ ದರ್ಶನ್ ಸಹೋದರ ದಿನಕರ್ ತೂಗುದೀಪ್, ನಿರ್ದೇಶಕ ಪ್ರೇಮ್ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ವಿಜಯಲಕ್ಷ್ಮೀ ದರ್ಶನ್ ಭೇಟಿ ಬಗ್ಗೆ ಸ್ಪಷ್ಟನೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಅವರ ಮಗನನ್ನು ಮೊದಲು ನಮ್ಮ ಸ್ಕೂಲಿಗೆ ಸೇರಿಸಿದ್ದರು. ಬಳಿಕ ಕಾರಣಾಂತರಗಳಿಂದ ಬೇರೆ ಸ್ಕೂಲಿಗೆ ಸೇರಿಸಿದ್ದರು. ಈಗ ಮತ್ತೆ ನಮ್ಮ ಸ್ಕೂಲಿಗೆ ಸೇರಿಸಲು ಮುಂದಾಗಿದ್ದಾರೆ. ಪ್ರಾಂಶುಪಾಲರನ್ನು ಭೇಟಿಯಾಗಿದ್ದರಂತೆ. ಆದರೆ ಪ್ರಾಂಶುಪಾಲರು ಒಪ್ಪಿಲ್ಲ ಎನ್ನಲಾಗಿದೆ. ಹಾಗಾಗಿ ನನ್ನನ್ನು ಭೇಟಿಯಾಗಿ ಈ ಬಗ್ಗೆ ಮಾತನಾಡಿದರು. ನಾನು ಪ್ರಾಂಶುಪಾಲರಿಗೆ ಹೇಳುತ್ತೇನೆ. ಶಾಲೆ ಪ್ರವೇಶಕ್ಕೆ ಪರೀಕ್ಷೆಗಳು ಇರುತ್ತವೆ. ಕೆಲ ನಿಯಮಗಳು ಇರುತ್ತವೆ ಎಂದು ಹೇಳಿದರು.

ಇನ್ನು ದರ್ಶನ್ ಪ್ರಕರಣದ ಬಗ್ಗೆ ನಾನಾಗಲಿ, ಸರ್ಕಾರವಾಗಲಿ ಮಧ್ಯಪ್ರವೇಶ ಮಾಡಲ್ಲ. ಈ ಬಗ್ಗೆ ಯಾವ ಚರ್ಚೆಯೂ ಆಗಿಲ್ಲ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read