ರೇಣುಕಾಸ್ವಾಮಿ ಹತ್ಯೆ ಪ್ರಕರಣ ಬಗ್ಗೆ ಪೊಲೀಸ್ ವಿಚಾರಣೆ ಬಳಿಕ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪೋಸ್ಟ್

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆಯ ಬಳಿಕ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದಾರೆ.

ಕೊಲೆಯಾದ ರೇಣುಕಾ ಸ್ವಾಮಿ ಕುಟುಂಬದವರಿಗೆ ಸಂತಾಪ ಸೂಚಿಸಿದ್ದಾರೆ. ತಾಯಿ ಚಾಮುಂಡೇಶ್ವರಿ ಹಾಗೂ ಕಾನೂನಿನ ಮೇಲೆ ನನಗೆ ವಿಶ್ವಾಸವಿದೆ. ಸತ್ಯಾಸತ್ಯತೆ ಆದಷ್ಟು ಬೇಗ ಹೊರಬರಲಿ, ಸತ್ಯಮೇವ ಜಯತೆ ಎಂದು ಬರೆದಿದ್ದಾರೆ.

ರೇಣುಕಾಸ್ವಾಮಿ ಕುಟುಂಬಕ್ಕೆ ನನ್ನ ಸಂತಾಪ ವ್ಯಕ್ತಪಡಿಸುತ್ತೇನೆ. ಜೊತೆಗೆ, ಕಳೆದ ಕೆಲವು ದಿನಗಳಿಂದ ದರ್ಶನ್, ನಾನು, ನನ್ನ ಹದಿಹರೆಯದ ಮಗ ಮತ್ತು ದರ್ಶನ್ ಅವರ ಎಲ್ಲಾ – ಸ್ನೇಹಿತರು, ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ತುಂಬಿದೆ. ಗೌರವಾನ್ವಿತ ನ್ಯಾಯಾಲಯವು ಹೊರಡಿಸಿದ ಆದೇಶದಂತೆ ಕೆಲವು ಮಾಧ್ಯಮಗಳು ಮತ್ತು ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್‌ ಫಾರ್ಮ್‌ ಗಳಲ್ಲಿ ಸುಳ್ಳು ಮಾಹಿತಿ ಮತ್ತು ಅಸತ್ಯಗಳನ್ನು ಪ್ರಕಟಿಸಬೇಡಿ. ಅಧಿಕಾರಿಗಳು ಅಧಿಕೃತವಾಗಿ ಹೇಳಿದ್ದನ್ನು ಮಾತ್ರ ಪ್ರಕಟಿಸಿ. ತಾಯಿ ಚಾಮುಂಡೇಶ್ವರಿ ಮತ್ತು ನಮ್ಮ ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ನ್ಯಾಯವು ಮೇಲುಗೈ ಸಾಧಿಸಲಿ ಎಂದು ಪೋಸ್ಟ್ ಹಾಕಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read