HomeEntertainmentವಿಜಯಲಕ್ಷ್ಮೀ ದರ್ಶನ್ ಗೆ ಅಶ್ಲೀಲ ಕಮೆಂಟ್ ಕೇಸ್: ಚಾರ್ಜ್ ಶೀಟ್ ಸಲ್ಲಿಕೆ: ಬಂಧಿತರಲ್ಲಿ ಕೆಲವರು ಕಿಚ್ಚ...

ವಿಜಯಲಕ್ಷ್ಮೀ ದರ್ಶನ್ ಗೆ ಅಶ್ಲೀಲ ಕಮೆಂಟ್ ಕೇಸ್: ಚಾರ್ಜ್ ಶೀಟ್ ಸಲ್ಲಿಕೆ: ಬಂಧಿತರಲ್ಲಿ ಕೆಲವರು ಕಿಚ್ಚ ಸುದೀಪ್ ಅಭಿಮಾನಿಗಳು

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಅಶ್ಲೀಲ ಕಾಮೆಂಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಈಗಾಗಲೇ ಪ್ರಕರಣ ಸಂಬಂಧ ಆರು ಆರೋಪಿಗಳನ್ನು ಬಂಧಿಸಿದ್ದು, ಅವರಲ್ಲಿ ಕೆಲವರು ನಟ ಕಿಚ್ಚ ಸುದೀಪ್ ಅಭಿಮಾನಿಗಳು ಎಂಬುದು ಬಯಲಾಗಿದೆ. ನಕಲಿ ಐಡಿ ಬಳಸಿ ಕಾಮೆಂಟ್‌ ಮಾಡಿರುವ ಆರೋಪದ ಮೇಲೆ ಬಂಧಿತರು ಸದ್ಯ ಜೈಲಿನಲ್ಲಿದ್ದು, ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯಲಕ್ಷ್ಮೀ ದರ್ಷನ್ ತಮಗೆ ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿದ್ದ ಅಶ್ಲೀಲ ಕಾಮೆಂಟ್ ವಿರುದ್ಧ ಸಮರ ಸಾರಿದ್ದರು. ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಅದಕ್ಕೆ ಬೇಕಾದ ಸಾಕ್ಷ್ಯ ಕೂಡ ನೀಡಿದ್ದರು. ಈ ಸಂಬಂಧ ತನಿಖೆ ನಡೆಸಿ ಪೊಲೀಸರು, ಹಲವರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಈಗ ಚಾರ್ಜ್​​ಶೀಟ್ ಸಲ್ಲಿಕೆ ಮಾಡಿದ್ದು, ಕೆಲವು ಮಹತ್ವದ ಮಾಹಿತಿ ಬಯಲಾಗಿದೆ.

ಸೈಬರ್ ಕ್ರೈಂ ಪೊಲೀಸರು ಬೆಂಗಳುರಿನ 45ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರು ಆರೋಪಿಗಳ ವಿರುದ್ಧ ಸುಮಾರು 473 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್ ಶೀಟ್​ನಲ್ಲಿ ಆರು ಆರೋಪಿಗಳ ಹೇಳಿಕೆ ದಾಖಲು ಮಾಡಲಾಗಿದೆ. ಆರೋಪಿಗಳಲ್ಲಿ ಕೆಲವರು ನಟ ಸುದೀಪ್ ಅಭಿಮಾನಿಗಳು ಎಂಬ ವಿಷಯ ಬಹಿರಂಗವಾಗಿದೆ. ಎಲ್ಲರೂ ನಕಲಿ ಐಡಿಗಳನ್ನು ಕ್ರಿಯೇಟ್ ಮಾಡಿ ಕಾಮೆಂಟ್ ಮಾಡಿದ್ದಾರೆ. ಕೆಲವರು ಕಾಮೆಂಟ್ ಮಾಡೋ ಉದ್ದೇಶಕ್ಕೆ ನಕಲಿ ಅಕೌಂಟ್ ಓಪನ್ ಮಾಡಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಇನ್ನುಂದು ವಿಷವೆಂದರೆ ಪೋಸ್ಟ್ ಮಾಡುತ್ತಿರುವುದು ಅಶ್ಲೀಲ ಎಂಬುದು ಗೊತ್ತಿದ್ದೇ ಕಾಮೆಂಟ್ ಮಾಡಿರೋದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಆರೋಪಿಗಳ ಮೊಬೈಲ್ ಅನ್ನು ವಶಪಡಿಸಿಕೊಂಡು ಎಫ್​ಎಸ್​ಎಲ್​ಗೆ ರವಾನೆ ಮಾಡಲಾಗಿದ್ದು, ಡೇಟಾ ರಿಟ್ರೀವ್ ಮಾಡಿ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

ಕಾಮೆಂಟ್ ಮಾಡಿದ 12 ಐಡಿಗಳ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಈ ಸಂಬಂಧ ಕಂಪನಿಗಳಿಗೆ ಪತ್ರ ಬರೆಯಲಾಗಿದ್ದು, ಇನ್ನಷ್ಟೇ ಅವರಿಂದ ಉತ್ತರ ಬರಬೇಕಿದೆ. ಸದ್ಯ ಪೊಲೀಸರು ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸೋದಾಗಿ ಉಲ್ಲೇಖ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಮತ್ತೊಂದೆಡೆ ಆರೋಪಿಗಳು ಜಾಮೀನಿಗಾಗಿ ಹೈಕೋರ್ಟ್​ ಮೊರೆ ಹೋಗಿದ್ದಾರೆ. ಅರ್ಜಿ ಕೈಗೆತ್ತಿಕೊಂಡಿರುವ ಹೈಕೋರ್ಟ್, ವಿಚಾರಣೆಯನ್ನು ಮಾರ್ಚ್ 24ಕ್ಕೆ ಮುಂದೂಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular