HomeKarnatakaಪವಿತ್ರಾ ಗೌಡ ದರ್ಶನ್ ಪತ್ನಿ ಅಲ್ಲ: ವಿಜಯಲಕ್ಷ್ಮಿ ಪತ್ರ

ಪವಿತ್ರಾ ಗೌಡ ದರ್ಶನ್ ಪತ್ನಿ ಅಲ್ಲ: ವಿಜಯಲಕ್ಷ್ಮಿ ಪತ್ರ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಪವಿತ್ರಾಗೌಡ ಅವರು ದರ್ಶನ್ ಪತ್ನಿ ಎಂದು ಉಲ್ಲೇಖಿಸದಂತೆ ನಗರ ಪೊಲೀಸ್ ಆಯುಕ್ತರಿಗೆ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಪತ್ರ ಬರೆದಿದ್ದಾರೆ.

2003ರಲ್ಲಿ ನಾನು ಮತ್ತು ದರ್ಶನ್ ಮದುವೆಯಾಗಿದ್ದು, ನಮಗೆ ಒಬ್ಬ ಪುತ್ರನಿದ್ದಾನೆ. ಆದರೆ, ಸಂಜಯ್ ಸಿಂಗ್ ಎಂಬುವರ ಜೊತೆ ಪವಿತ್ರಾ ಗೌಡಗೆ ಮದುವೆಯಾಗಿದ್ದು, ಅವರಿಗೂ ಒಬ್ಬ ಪುತ್ರಿ ಇದ್ದಾಳೆ. ನೀವು ಪತ್ರಿಕಾಗೋಷ್ಠಿಯಲ್ಲಿ ದರ್ಶನ್ ಅವರ ಪತ್ನಿ ಪವಿತ್ರಾ ಗೌಡ ಎಂದು ಹೇಳಿದ್ದೀರಿ. ಗೃಹ ಸಚಿವರು ಕೂಡ ಅದೇ ರೀತಿ ಹೇಳಿದ್ದಾರೆ. ಹೀಗಾಗಿ ಪೊಲೀಸ್ ದಾಖಲೆಗಳಲ್ಲಿ ಪವಿತ್ರಾ ಗೌಡರನ್ನು ದರ್ಶನ್ ಅವರ ಪತ್ನಿ ಎಂದು ಉಲ್ಲೇಖಿಸದಂತೆ ವಿಜಯಲಕ್ಷ್ಮಿ ಮನವಿ ಮಾಡಿ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular