HomeEntertainmentBIG NEWS: ಕಾನೂನು ಕ್ರಮದ ಎಚ್ಚರಿಕೆ ನೀಡಿದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ

BIG NEWS: ಕಾನೂನು ಕ್ರಮದ ಎಚ್ಚರಿಕೆ ನೀಡಿದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ

ಬೆಂಗಳೂರು: ನಟ ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡು ತಪ್ಪು ಸಂದೇಶ ನೀಡುವಂತಹ ಶೀರ್ಷಿಕೆಗಳನ್ನು ಹಾಕಿರುವ ಪವಿತ್ರಾ ಗೌಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಎಚ್ಚರಿಕೆ ನೀಡಿದ್ದಾರೆ.

ಪತಿ ದರ್ಶನ್ ಹಾಗೂ ಮಗ ವಿನೀತ್ ಜೊತೆಗಿನ ಫೋಟೋವೊಂದನ್ನು ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು, ‘ಕುಟುಂಬವೇ ಎಲ್ಲಾ’ ಎಂದು ಬರೆದುಕೊಂಡಿದ್ದರು. ಅದಾದ ಕೆಲವೇ ಹೊತ್ತಲ್ಲಿ ಪವಿತ್ರಾ ಗೌಡ ತಮ್ಮ ಹಾಗೂ ದರ್ಶನ್ ಅವರ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ‘ ನಮ್ಮ ಸಂಬಂಧಕ್ಕೆ 10 ವರ್ಷವಾಯಿತು. ಇನ್ನೂ ಹಲವು ವರ್ಷ ಜೊತೆಗೆ ಸಾಗಬೇಕು’ ಎಂದು ಕ್ಯಾಪ್ಶನ್ ನೀಡಿದ್ದರು.

ಪವಿತ್ರಾ ಗೌಡ ಅವರ ಪೋಸ್ಟ್ ಗೆ ಆಕ್ರೋಶ ವ್ಯಕ್ತಪಡಿಸಿರುವ ದರ್ಶನ್ ಪತ್ನಿ ವಿಜಯಲಕ್ಷ್ಮೀ, ಈ ಮಹಿಳೆಗೆ ಪ್ರಜ್ಞೆ ಇದ್ದಿದ್ದರೆ ಬೇರೊಬ್ಬರ ಗಂಡನ ಚಿತ್ರವನ್ನು ಪೋಸ್ಟ್ ಮಾಡುತ್ತಿರಲಿಲ್ಲ. ಈ ಕೆಲಸ ಆಕೆಯ ನೈತಿಕತೆ ಹಾಗೂ ಆದರ್ಶ ಎಂತಾದ್ದು ಎಂಬುದನ್ನು ತೋರಿಸುತ್ತದೆ. ವ್ಯಕ್ತಿಯೋರ್ವ ವಿವಾಹಿತನೆಂಬುದು ತಿಳಿದಿದ್ದರೂ ಈಕೆ ತನ್ನ ವೈಯಕ್ತಿಕ ಅಗತ್ಯಗಳಿಗಾಗಿ ಹಾಗೂ ಲಾಭಕ್ಕಾಗಿ ಹತ್ತಿರವಾಗುತ್ತಾಳೆ..

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಖುಷಿ ಗೌಡ ಪವಿತ್ರಾ ಹಾಗೂ ಸಂಜಯ್ ಸಿಂಗ್ ರ ಮಗಳು ಎಂಬುದನ್ನು ಸಾಬೀತು ಮಾಡುತ್ತವೆ ಈ ಚಿತ್ರಗಳು. ನಾನು ಸಾಮಾನ್ಯವಾಗಿ ವೈಯಕ್ತಿಕ ವಿಷಯಗಳ ಬಗ್ಗೆ ಮಾತನಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವುದಿಲ್ಲ. ಆದರೆ ಈಗ ನನ್ನ ಕುಟುಂಬದ ಹಿತದೃಷ್ಟಿಯಿಂದ ಧ್ವನಿ ಎತ್ತುವ ಸಮಯ ಬಂದಿದೆ ಎಂದು ನಾನು ಭಾವಿಸಿದ್ದೇನೆ. ಇಡೀ ಸಮಾಜಕ್ಕೆ ತಪ್ಪು ಸಂದೇಶ ನೀಡುವಂತಹ ಚಿತ್ರಣ ನೀಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ವಿಜಯಲಕ್ಷ್ಮಿ ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular