HomeLatest NewsBIG NEWS : ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ  ಮನೆಯಲ್ಲಿ 3 ಲಕ್ಷ ಕಳುವು ಕೇಸ್...

BIG NEWS : ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ  ಮನೆಯಲ್ಲಿ 3 ಲಕ್ಷ ಕಳುವು ಕೇಸ್ : ಹಣದ ಮೂಲದ ಬಗ್ಗೆ ಮಾಹಿತಿ ಕೇಳಿದ ಪೊಲೀಸರು

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ 3 ಲಕ್ಷ ನಗದು ಹಣ ಕಳುವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಪೊಲೀಸರು 9 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆದರೆ ಹಣ ಕಳುವು ಮಾಡಿದವರು ಈವರೆಗೂ ಪತ್ತೆಯಾಗಿಲ್ಲ.

ಈ ನಡುವೆ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು 3 ಲಕ್ಷ ಹಣದ ಮೂಲದ ಬಗ್ಗೆ ಮಾಹಿತಿ ನೀಡುವಂತೆ ವಿಜಯಲಕ್ಷ್ಮೀ ದರ್ಶನ್ ಅವರಿಗೆ ಕೇಳಿದ್ದಾರೆ. ಹಣವನ್ನು ಯಾವ ಕಾರಣಕ್ಕಾಗಿ ಮನೆಯಲ್ಲಿ ಇಟ್ಟುಕೊಂಡಿದ್ದಿರಿ? ಆ ಹಣದ ಮೂಲವೇನು? ಎಂಬ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

ಇನ್ನು ಪ್ರಕರಣ ಸಂಬಂಧ ಈಗಾಗಲೇ ವಿಜಯಲಕ್ಷ್ಮೀ ಮ್ಯಾನೇಜರ್ ನಾಗರಾಜ್, ವಿಜಯಲಕ್ಷ್ಮೀ, ಹಾಗೂ ಅವರ ತಾಯಿ, ಮಗ ವಿನೀಶ್ ಮತ್ತು ಅವರ ಮೂವರು ಸ್ನೇಹಿತರನ್ನು ವಿಚಾರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular