ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಅಶ್ಲೀಲ ಕಮೆಂಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳ ವಿರುದ್ಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ವಿಜಯಲಕ್ಷ್ಮೀ ದರ್ಶನ್ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಬಗ್ಗೆ ವಿಜಯಲಕ್ಷ್ಮೀ ದೂರು ನೀಡಿದ್ದ ಹಿನ್ನೆಲೆಯಲ್ಲಿ ಸೈಬರ್ ಕ್ರೈಂ ಪೊಲೀಸರು ಸಾಫ್ಟ್ ವೇರ್ ಇಂಜಿನಿಯರ್, ಬ್ಯಾಂಕ್ ಮ್ಯಾನೇಜರ್ ಸೇರಿ 6 ಆರೋಪಿಗಳನ್ನು ಬಂಧಿಸಿದರು. ಆರು ಆರೋಪಿಗಳು ಜೈಲುಪಾಲಾಗಿದ್ದಾರೆ.
ಆರೋಪಿಗಳ ಬಂಧನದ 60 ದಿನಗಳ ಒಳಗಾಗಿ ಚಾರ್ಜ್ ಶೀಟ್ ಸಲ್ಲಿಸುವ ಅಗತ್ಯ ಹಿನ್ನೆಲೆಯಲ್ಲಿ ಪೊಲೀಸರು 6 ಆರೋಪಿಗಳ ವಿರುದ್ಧ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಉಳಿದ ಆರೋಪಿಗಳು ನಾಪತ್ತೆಯಾಗಿದ್ದಾರೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

