HomeKarnatakaBIG NEWS: ಭೀಕರ ಕಾರು ಅಪಘಾತ; ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ದುರ್ಮರಣ

BIG NEWS: ಭೀಕರ ಕಾರು ಅಪಘಾತ; ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ದುರ್ಮರಣ

ವಿಜಯನಗರ: ಭೀಕರ ಕಾರು ಅಪಘಾತದಲ್ಲಿ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಕ್ರಾಸ್ ಬಳಿ ನಡೆದಿದೆ.

ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಚಿನ್ನುಪಾಟೀಲ (26), ಯುವರಾಜ(28) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನೂ ಮೂವರು ಗಂಭಿರವಾಗಿ ಗಾಯಗೊಂಡಿದ್ದಾರೆ.

ಮಂಜು, ವೀರಣ್ಣ ಹಾಗೂ ಚಿದಂಬರಂ ಗಾಯಾಳುಗಳು. ಮೂವರು ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗದಗ ಜಿಲ್ಲೆಯಿಂದ ಕೇರಳಕ್ಕೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಚಿಕ್ಕಜೋಗನಹಳ್ಳಿ ಕ್ರಾಸ್ ಬಳಿ ಡೈವೈಡರ್ ಗೆ ಕಾರು ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.

ಖಾನಾಹೊಸಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular