HomeKarnatakaBIG NEWS: ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಂದೆ

BIG NEWS: ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಂದೆ

ವಿಜಯನಗರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಂಚೋಬನಹಳ್ಳಿಯಲ್ಲಿ ನಡೆದಿದೆ.

ಇಬ್ಬರು ಮಕ್ಕಳ ಜೊತೆ ತಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೌಟುಂಬಿಕ ಕಲಹದಿಂದಾಗಿ ಮಾರಪ್ಪ ಎಂಬುವವರು ತನ್ನ ಇಬ್ಬರು ಮಕ್ಕಳ ಜೊತೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಅಸ್ವಸ್ಥಗೊಂಡಿರುವ ಮೂವರನ್ನು ಕೂಡ್ಲಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರಪ್ಪನ ಸ್ಥಿತಿ ಗಂಭೀರವಾಗಿದ್ದು, ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಖಾನಾಹೊಸಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular