HomeKarnatakaBREAKING: ವಿಜಯನಗರದಲ್ಲಿ ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ಇಬ್ಬರು ಸಾವು

BREAKING: ವಿಜಯನಗರದಲ್ಲಿ ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ಇಬ್ಬರು ಸಾವು

ವಿಜಯನಗರ: ಬೈಕ್, ಕಾರು, ಬಸ್ ಗೆ ಬೆಳ್ಳುಳ್ಳಿ ತುಂಬಿದ್ದ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಾಣಾಪುರ ಬಳಿ ನಡೆದಿದೆ.

ಲಾರಿ ಚಾಲಕನ ಅಜಾಗರೂಕತೆಯೇ ದುರಂತಕ್ಕೆ ಕಾರಣ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಘಟನೆ ನಡೆದಿದೆ. ಬೈಕ್, ಕಾರು, ಬಸ್ ಗೆ ಡಿಕ್ಕಿ ಹೊಡೆದ ಲಾರಿ ಕಾರನ್ನು 100 ಮೀಟರ್ ದೂರದವರೆಗೆ ಎಳೆದೊಯ್ದಿದೆ. ಲಾರಿ ಕೆಳಗೆ ಸಿಲುಕಿ ಇಬ್ಬರು ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular