HomeLatest Newsತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಸಹೋದರರಿಬ್ಬರೂ ನೀರಿನಲ್ಲಿ ಮುಳುಗಿ ಸಾವು

ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಸಹೋದರರಿಬ್ಬರೂ ನೀರಿನಲ್ಲಿ ಮುಳುಗಿ ಸಾವು

ವಿಜಯನಗರ: ಬಿಸಿಲ ಝಳ ಹಿನ್ನೆಲೆಯಲ್ಲಿ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಸಹೋದರರಿಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಹಲವಾಗಲು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಮನು (19) ಹಾಗೂ ಪ್ರಜ್ವಲ್ (18) ಮೃತ ಸಹೋದರರು. ತಂಡೆಯ ಕಣ್ಣೆದುರೇ ಅಣ್ಣ-ತಮ್ಮ ಇಬ್ಬರೂ ನೀರುಪಾಲಾಗಿದ್ದಾರೆ.

ಮೂವರು ಸಹೋದರರು ತುಂಗಭದ್ರಾನದಿಯಲ್ಲಿ ಈಜಲು ಹೋಗಿದ್ದರು. ಈ ವೇಳೆ ಇಬ್ಬರು ಸಹೋರರರು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ತಂದೆ ಮಂಜಪ್ಪ ಸಮಯಪ್ರಜ್ಞೆಯಿಂದ ಕೊನೇ ಮಗ ಚಿರಂಜೀವಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ ಉಳಿದ ಇಬರು ಮಕ್ಕಳನ್ನು ರಕ್ಷಿಸಲಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಬ್ಬರು ಮಕ್ಕಳನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಹಲವಾಗಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular